ಕೂಡಿಗೆ, ಜೂ. 20: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂತೆಯು ಗ್ರಾಮ ಪಂಚಾಯತಿ ಸಮೀಪದಲ್ಲಿರುವ ಸೋಮವಾರಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿದ ಮಾರುಕಟ್ಟೆ ಉ¥ ಕಟ್ಟಡದ ಆವರಣದಲ್ಲಿ ಪ್ರಾರಂಭಗೊಂಡಿದೆ.

ಲಾಕ್‍ಡೌನ್ ಹಿನ್ನೆಲೆ ನಾಲ್ಕು ತಿಂಗಳುಗಳಿಂದ. ಮಾರುಕಟ್ಟೆಯಲ್ಲಿ ಸಂತೆ ಸ್ಥಗಿತಗೊಂಡಿತ್ತು. ಇದರಿಂದ ಜನಸಾಮಾನ್ಯರಿಗೆ ಮತ್ತು ಕಾರ್ಮಿಕ ವರ್ಗದವರಿಗೆ ತೊಂದರೆ ಆಗುತ್ತಿತ್ತು. ಇದೀಗ ಲಾಕ್‍ಡೌನ್ ಸಡಿಲಿಕೆಯಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್‍ಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುವಂತೆ ಸೂಚನೆ ನೀಡಿದ ಮೇರೆಗೆ ವ್ಯಾಪಾರಸ್ಥರು ತಮಗೆ ನಿಗದಿ ಮಾಡಿದ ಸ್ಥಳದಲ್ಲಿ ವ್ಯಾಪಾರ ಪ್ರಾರಂಭಿಸಿದರು

ಈ ಸಂದರ್ಭ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಿ ರವಿ ಮತ್ತು ಅಭಿವೃದ್ಧಿ ಅಧಿಕಾರಿ ಅಯಿಷಾ ಸೇರಿದಂತೆ ಸಿಬ್ಬಂದಿಗಳು ವ್ಯಾಪಾರಸ್ಥರಿಗೆ ಮತ್ತು ಗ್ರಾಹಕರಿಗೆ ಮಾಸ್ಕ್ ಮಾಹಿತಿ, ಶುಚಿತ್ವದ ಬಗ್ಗೆ ಗಮನಹರಿಸುವಂತೆ ಸಲಹೆಗಳನ್ನು ನೀಡಿದ್ದಾರೆ. ಸಂತೆ ಸುಂಕದ ಬಿಡ್ಡುದಾರರು ಹರಾಜಿನಲ್ಲಿ ಭಾಗವಹಿಸದೆ ಇರುವುದರಿಂದ. ಗ್ರಾಮ ಪಂಚಾಯತಿ ವತಿಯಿಂದ ಸಂತೆ ಸುಂಕವನ್ನು ವಸೂಲಿ ಮಾಡಲಾಯಿತು.