ಆಲೂರುಸಿದ್ದಾಪುರ, ಜೂ. 19 : ಶನಿವಾರಸಂತೆ ಕಾರ್ಯನಿರತÀ ಪತ್ರಕರ್ತರ ಸಂಘದ ವತಿಯಿಂದ ನಿರ್ಮಿಸಿರುವ ನೂತನ ಪತ್ರಿಕಾ ಭವನದ ಉದ್ಘಾಟನಾ ಕಾರ್ಯಕ್ರಮ ತಾ. 22 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶನಿವಾರಸಂತೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಆರ್. ಹರೀಶ್‍ಕುಮಾರ್ ವಹಿಸಲಿದ್ದು ಸಭಾ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಲಿರುವರು. ಕೊಡಗು-ಮೈಸೂರು ಸಂಸದ ಪ್ರತಾಪ್‍ಸಿಂಹ ನೂತನ ಪತ್ರಿಕಾ ಭವನ ಉದ್ಘಾಟಿಸಲಿದ್ದು, ಪತ್ರಿಕಾಗೋಷ್ಠಿ ವೇದಿಕೆಯನ್ನು ಎಂಎಲ್‍ಸಿ ಸುನಿಲ್ ಸುಬ್ರಮಣಿ ಉದ್ಘಾಟಿಸುತ್ತಾರೆ. ಎಂಎಲ್‍ಸಿ ವೀಣಾ ಅಚ್ಚಯ್ಯ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸುತ್ತಾರೆ

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಹೈಕೋರ್ಟಿನ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ, ಮಾಜಿ ಸಚಿವ ಬಿ.ಎ. ಜೀವಿಜಯ, ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷ ಎಂ.ಎ.ಮಹಮ್ಮದ್‍ಗೌಸ್, ಬೆಂಗಳೂರು ಗ್ರಾಮಾಂತರ ಪತ್ರಕರ್ತರ ಸಂಘದ ಅಧ್ಯಕ್ಷ ಮಂಡಿಬೆಲೆ ರಾಜಣ್ಣ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಭಾರತೀಯ ಪತ್ರಕರ್ತರ ಒಕ್ಕೂಟದ ಸದಸ್ಯ ಎಂ.ಎ .ಮರುಳೀಧರ್, ಪತ್ರಕರ್ತರ ಸಂಘದ ರಾಜ್ಯ ಪತ್ರಿನಿಧಿ ಅಜ್ಜಮಾಡ ರಮೇಶ್ ಕುಟ್ಟಪ್ಪ, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಜಿ.ಪಂ. ಸದಸ್ಯರಾದ ಸಿ.ಪಿ. ಪುಟ್ಟರಾಜು, ಸರೋಜಮ್ಮ, ತಾ.ಪಂ. ಸದಸ್ಯ ಬಿ.ಎಸ್. ಅನಂತ್‍ಕುಮಾರ್, ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷ ಸಿ.ಜೆ.ಗಿರೀಶ್, ಸೋಮವಾರಪೇಟೆ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಮಹೇಶ್, ಮಾಜಿ ಗ್ರಾ.ಪಂ. ಅಧ್ಯಕ್ಷ ಎಸ್.ಎನ್.ರಘು, ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಚಂಗಪ್ಪ ಮುಂತಾದವರು ಪಾಲ್ಗೊಳ್ಳುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.