ಮಡಿಕೇರಿ, ಜೂ. 19: ಸರಕಾರದ ಮಾರ್ಗಸೂಚಿಯನ್ವಯ ಭಾಗಮಂಡಲದಲ್ಲಿ ಪಿಂಡ ಪ್ರದಾನಕ್ಕೆ ಅವಕಾಶ ನಿರಾಕರಿಸಿರುವುದನ್ನು ಮಾರ್ಪಡಿಸಿ, ಪಿಂಡ ಪ್ರದಾನಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಕೋರಿ ಮುಖ್ಯಮಂತ್ರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊಡವಾಮೆರ ಕೊಂಡಾಟ ಕೂಟ ಮನವಿ ಮಾಡಿದೆ.

ಲಾಕ್‍ಡೌನ್‍ನಿಂದ ಭಾಗಮಂಡಲದಲ್ಲಿ ಪಿಂಡ ಪ್ರದಾನಕ್ಕೆ ತಾತ್ಕಾಲಿಕ ತಡೆಯೊಡ್ಡಿರುವುದರಿಂದ ಜನಾಂಗದ ಮೃತ ವ್ಯಕ್ತಿಯ ಅಂತ್ಯಕ್ರಿಯೆ ಸಮಾಪ್ತಿಗೆ ತೀವ್ರ ಅಡಚಣೆಯಾಗುತ್ತಿದೆ. ಆದುದರಿಂದ ಈ ಪಿಂಡ ಪ್ರದಾನ ಕಾರ್ಯಕ್ಕೆ ಅನುವು ಮಾಡಿಕೊಟ್ಟು, ಧಾರ್ಮಿಕ ಆಚರಣೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಸಮಸ್ತ ಕೊಡವ ಜನಾಂಗದ ಪರವಾಗಿ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಮನವಿ ಮಾಡಿದ್ದಾರೆ.