ಸುಂಟಿಕೊಪ್ಪ, ಜೂ. 21: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಜಾಗೃತಿ ಜಾಥಾ ರಥ ಯಾತ್ರೆಗೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪಿ.ಕೆ.ಸುಕುಮಾರ್. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ವಿಜಯಲಕ್ಷ್ಮಿ ಚಾಲನೆ ನೀಡಿದರು.
ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಸಿರಾಜ್ ಆಹ್ಮದ್ ಮಾತನಾಡಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು. ಕಾರ್ಮಿಕ ಪದ್ಧತಿ ನಿಲ್ಲಬೇಕು. ಈ ನಿಟ್ಟಿನಲ್ಲಿ ಕೊಡಗಿ ನಾದ್ಯಂತ ಜನಜಾಗೃತಿ ನಡೆಸ ಲಾಗುತ್ತದೆ. ಬಾಲ ಕಾರ್ಮಿಕರನ್ನಾಗಿ ನೇಮಿಸಿಕೊಂಡ ಮಾಲೀಕರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಇಂತವರಿಗೆ ಕಾನೂನಿನಲ್ಲಿ 2 ವರ್ಷ ಜೈಲು 5 ಸಾವಿರ ದಂಡ ವಿಧಿಸಲಾಗುವುದು. 14 ವರ್ಷದ ಎಲ್ಲಾ ಮಕ್ಕಳಿಗೂ ಕಡ್ಡಾಯ ಶಿಕ್ಷಣ ನೀಡ ಬೇಕು ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಆರೋಗ್ಯ ಕಾರ್ಯಕರ್ತೆ ಎನ್.ಸಿ.ಸುನಿತ,ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ದನಂಜಯ,ಅಣ್ಣಪ್ಪ, ಶೃತಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಭಾಗೀರತಿ, ಸುಮಾ, ಯಶೋದ, ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಶಿಕ್ಷಕರಾದ ದಿನೇಶ್, ಸಾರ್ವಜನಿಕರು ಹಾಜರಿದ್ದರು.