ನಾಪೆÇೀಕ್ಲು, ಜೂ. 21: ನಾಪೆÇೀಕ್ಲು - ಕಕ್ಕಬ್ಬೆ - ವೀರಾಜಪೇಟೆ ಮುಖ್ಯ ರಸ್ತೆಯ ಕೋಟೇರಿ ಮತ್ತು ಕೊಳಕೇರಿಯಲ್ಲಿ ರಸ್ತೆಯ ಹಲವು ಕಡೆ ಹೊಂಡಗಳು ನಿರ್ಮಾಣಗೊಂಡಿದ್ದು, ವಾಹನ ಚಾಲಕರು ಪರದಾಡು ವಂತಾಗಿದೆ.

ಲೋಕೋಪಯೋಗಿ ಇಲಾಖೆಗೆ ಸೇರಿದ ಈ ರಸ್ತೆಯಲ್ಲಿ ಕಳೆದ ಆರು ತಿಂಗಳುಗಳ ಹಿಂದೆಯೇ ಗುಂಡಿಗಳು ನಿರ್ಮಾಣಗೊಂಡಿವೆ. ವಾಹನ ಸವಾರರು ಪರದಾಡುತ್ತಾ ಸಂಚರಿಸುತ್ತಿದ್ದಾರೆ. ಲಾಕ್ ಡೌನ್ ಕಾರಣದಿಂದ ವಾಹನ ದಟ್ಟನೆ ಕಡಿಮೆಯಾಗಿರುವ ಹಿನ್ನೆಲೆ ಯಾವದೇ ಅನಾಹುತ ಸಂಭವಿಸಿಲ್ಲ. ಮಳೆಗಾಲ ಆರಂಭಕ್ಕೆ ಮುನ್ನ ರಸ್ತೆ ಸೇರಿದಂತೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸ ಬೇಕೆಂದು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಗೆ ಹಿಂದೆಯೇ ಸೂಚಿಸಿದ್ದಾರೆ. ಆದರೆ, ಈ ರಸ್ತೆಯಲ್ಲಿ ಉಂಟಾದ ಹೊಂಡಗಳನ್ನು ಮುಚ್ಚುವ ಕೆಲಸವನ್ನು ಮಾಡದ ಹಿನ್ನೆಲೆಯಲ್ಲಿ ಈಗ ಮಳೆ ಆರಂಭಗೊಂಡಿದ್ದು, ಗುಂಡಿಗಳಲ್ಲಿ ಮಳೆ ನೀರು ಸಂಗ್ರಹಗೊಂಡು ರಸ್ತೆ ಯಾವುದು, ಗುಂಡಿಯಾವುದು ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟವರು ದುರಸ್ತಿಗೆ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.