ಗೋಣಿಕೊಪ್ಪಲು, ಜೂ.21: ಪೆÇಲೀಸರ ದೌರ್ಜನ್ಯ ಖಂಡಿಸಿ, ತಾ.22 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಶ್ರೀಮಂಗಲ ಪೆÇಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ.
ಕುಟ್ಟ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರಾದ ಪಲ್ವಿನ್ ಪೂಣಚ್ಚ ಮೇಲೆ ಪೆÇೀಲಿಸರು ಸುಳ್ಳು ಮೊಕದ್ದಮೆ ದಾಖಲು ಮಾಡಿರುವು ದನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್, ಎಂಎಲ್ಸಿ ವೀಣಾ ಅಚ್ಚಯ್ಯ, ಮಾಜಿ ಎಂ.ಎಲ್.ಸಿ.ಅರುಣ್ ಮಾಚಯ್ಯ, ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮೀದೇರಿರ ನವೀನ್ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.