ಸೋಮವಾರಪೇಟೆ, ಜೂ. 22: ಕೊಡಗಿನಲ್ಲಿ ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಸಾರ್ವಜನಿಕರು ಹೆಚ್ಚು ಜಾಗೃತರಾಗಬೇಕು ಎಂದಿರುವ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಅವರು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸಿ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳನ್ನು ಮತ್ತೆ ಮುಚ್ಚುವ ಬಗ್ಗೆ ಚರ್ಚಿಸ ಲಾಗುವದು ಎಂದು ತಿಳಿಸಿದ್ದಾರೆ. ಸೋಮವಾರಪೇಟೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲೆ ಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿರುವ ಬಗ್ಗೆಜಿಲ್ಲಾಡಳಿತದಿಂದ ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು. (ಮೊದಲ ಪುಟದಿಂದ) ಜಿಲ್ಲೆಯಲ್ಲಿ ಹೋಮ್ ಸ್ಟೇ ಹಾಗೂ ರೆಸಾರ್ಟ್‍ಗಳನ್ನು ಪುನಃ ಮಚ್ಚಬೇಕಾದ ಅನಿವಾರ್ಯತೆ ನಿರ್ಮಾಣವಾಗುವ ಸಂದರ್ಭ ಒದಗಬಹುದು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಮಂತ್ರಿಯೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವದು ಎಂದು ತಿಳಿಸಿದರು. ಲಾಕ್ ಡೌನ್ ತೆರವುಗೊಳಿಸಿದ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದು ಜಿಲ್ಲೆಯಲ್ಲಿ ತಂಗುತ್ತಿರುವ ಬಗ್ಗೆ ಸಚಿವರ ಗಮನ ಸೆಳೆಯಲಾಗುವದು. ತುರ್ತಾಗಿ ಜಿಲ್ಲಾಡಳಿತದ ಸಭೆ ಕರೆದು ಕೊರೊನಾ ನಿಗ್ರಹಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವದು ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.