ಮಡಿಕೇರಿ, ಜೂ. 21: ಮಡಿಕೇರಿ ತಾಲೂಕಿನ 6 ಅಂಗನವಾಡಿ ಕಾರ್ಯಕರ್ತೆ ಹಾಗೂ 7 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಆನ್ಲೈನ್ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 9 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 4 ರಿಂದ 9ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು. 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್ಸೈಟ್ ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿಯನ್ನು ಭರ್ತಿ ಮಾಡಬಹುದು. ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಇತರೇ ಯಾವುದೇ ರೂಪದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಖಾಲಿ ಇರುವ ಕೇಂದ್ರಗಳು ಮೊಣ್ಣಂಗೇರಿ, ಹೊದವಾಡ, ತಾಪ್ರಿಕಾಡು, ಅರಗಲು ಮೊಟ್ಟೆ, ಕೆರೆತಟ್ಟು ಮತ್ತು ಇಂದಿರಾ ಆವಾಜ್. ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇರುವ ಕೇಂದ್ರಗಳು ಕಕ್ಕಬೆ, ಪದಕಲ್ಲು, 90 ಮನೆ, ಕಿಕ್ಕರೆ, ಮರಗೋಡು ಬಕ್ಕ, ಕುಂಬಳಗೇರಿ, ಉಕ್ಕುಡ ಮತ್ತು ಸ್ಟೋನ್ ಹಿಲ್. ಹೆಚ್ಚಿನ ಮಾಹಿತಿಗೆ ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ-08272-228197 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.