ಶ್ರೀಮಂಗಲ, ಜೂ. 22 : ತಾ.ಪಂ. ಸದಸ್ಯ ಪಲ್ವಿನ್ ಪೂಣಚ್ಚ ಮತ್ತು ಶ್ರೀಮಂಗಲದ ಐ. ಸಂಜು ಅವರ ಪ್ರಕರಣ ವೈಯಕ್ತಿಕವಾಗಿದೆ. ಈ ಪ್ರಕರಣಕ್ಕೂ ಬಿಜೆಪಿ ಪಕ್ಷಕ್ಕೆ ಯಾವುದೇ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಬಿಜೆಪಿ ಪಕ್ಷ ಮತ್ತು ಸರಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಟೀಕೆ ಖಂಡನೀಯ ಎಂದು ವೀರಾಜಪೇಟೆ ಕ್ಷೇತ್ರದ ಬಿಜೆಪಿ ಉಪಾಧ್ಯಕ್ಷ ಮಚ್ಚಮಾಡ ಸುಮಂತ್ ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಬಹಿರಂಗ ಪ್ರತಿಭಟನೆಯಲ್ಲಿ ತಾ.ಪಂ. ಸದಸ್ಯ ಪಲ್ವಿನ್ ಪೂಣಚ್ಚ ಅವರ ಮೇಲೆ ಪ್ರಕರಣ ದಾಖಲಿಸಲು ಆಡಳಿತ ಪಕ್ಷ ಬಿಜೆಪಿ ಹಾಗೂ ಬಿಜೆಪಿ ಸರಕಾರ ಕುಮ್ಮಕ್ಕು ನೀಡಿದೆ ಎಂದು ಆರೋಪ ಮಾಡಿದ್ದಾರೆ. ಇದು ಸರಿಯಲ್ಲ. ಈ ಪ್ರಕರಣದಲ್ಲಿ ನಮ್ಮ ಪಕ್ಷದಿಂದ ಪೆÇಲೀಸ್ ಇಲಾಖೆಯ ಮೇಲೆ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಪುನರುಚ್ಚರಿಸಿದರು.

ಶ್ರೀಮಂಗಲ ಗ್ರಾ.ಪಂ. ಸದಸ್ಯ ಅಜ್ಜಮಾಡ ಜಯ ಅವರು ಮಾತನಾಡಿ ತಾ.ಪಂ ಸದಸ್ಯ ಪಲ್ವಿನ್ ಪೂಣಚ್ಚ ಮತ್ತು ಐ ಸಂಜು ಅವರ ಪ್ರಕರಣ ಹಣಕಾಸು ವಿಷಯಕ್ಕೆ ಸಂಬಂಧಿಸಿದೆಂದು ತಿಳಿದುಬಂದಿದೆ. ಬಿಜೆಪಿ ಪಕ್ಷದಿಂದ ಇಂತಹ ವಿಷಯಕ್ಕೆ ಬೆಂಬಲ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷದಿಂದ ಆಡಳಿತ ಪಕ್ಷ ಮತ್ತು ಸರಕಾರದ ವಿರುದ್ದ ತೇಜೋವಧೆ ಮಾಡುವುದು ಸರಿಯಲ್ಲ. ಈ ಪ್ರಕರಣದಲ್ಲಿ ಪೆÇಲೀಸರು ಸ್ವತಂತ್ರ್ಯವಾಗಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಹೇಳಿದರು. ಶ್ರೀಮಂಗಲದಲ್ಲಿ ನಡೆದ ಈ ಕುರಿತು ಸಭೆಯಲ್ಲಿ ಶ್ರೀಮಂಗಲ ಗ್ರಾ.ಪಂ. ಉಪಾಧ್ಯಕ್ಷ ಕಳ್ಳಂಗಡ ರಜತ್ ಪೂವಣ್ಣ, ಗ್ರಾ.ಪಂ. ಸದಸ್ಯ ಚೋನಿರ ಕಾಳಯ್ಯ, ಸ್ಥಾನೀಯ ಸಮಿತಿ ಮಾಜಿ ಅಧ್ಯಕ್ಷ ಕಾಳಿಮಾಡ ತಮ್ಮು ಮುತ್ತಣ್ಣ, ಮಾಜಿ ಕಾರ್ಯದರ್ಶಿ ಬಾಚಂಗಡ ದಾದ ದೇವಯ್ಯ ಇದ್ದರು.