ಕೂಡಿಗೆ, ಜೂ. 22: ಕೂಡಿಗೆಯ ಕೃಷಿ ಕ್ಷೇತ್ರದ ಆವರಣಕ್ಕೆ ಹೊಂದಿಕೊಂಡಿರುವ ಜಾಗದಲ್ಲಿರುವ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡದ ಕಾಮಗಾರಿ ಭರದಿಂದ ಸಾಗುತ್ತಿದೆ.
ಕಳೆದ ಹತ್ತು ವರ್ಷಗಳ ಹಿಂದೆ ಪ್ರಾರಂಭವಾದ ಕಾಲೇಜು ಅನೇಕ ಎಡರು ತೊಡರುಗಳ ನಡುವೆ ಉತ್ತಮ ಶೆ. 98 ರಷ್ಟು ಪಿಯುಸಿಯಲ್ಲಿ ಫಲಿತಾಂಶ ನೀಡುತ್ತಾ ಬಂದಿದೆ. ಅಲ್ಲದೆ ಗ್ರಾಮಾಂತರ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ 250ಕ್ಕೂ ಹೆಚ್ಚು ಇದೆ.
ಈ ಕಾಲೇಜಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೇಟಿ ನೀಡಿದಾಗ ವಿದ್ಯಾರ್ಥಿಗಳ ಸಂಖ್ಯೆಯನ್ನು ಗಮನಿಸಿ ಹೆಚ್ಚುವರಿಯಾಗಿ ಕಟ್ಟಡವನ್ನು ನಿರ್ಮಿಸಲು ಹಣ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಇಲಾಖೆಯ ಯೋಜನೆಯ ಅಡಿಯಲ್ಲಿ ನಬಾರ್ಡ್‍ನ ಸಹಕಾರದಲ್ಲಿ ನೂತನ ವಾಗಿ ಮೂರು ಕಟ್ಟಡಗಳ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ. ಈ ಕೇಂದ್ರದಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳ ತರಗತಿಗಳು ನಡೆಯುತ್ತಿವೆ.