ಮಡಿಕೇರಿ, ಜೂ. 23: ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ತಾ. 25 ರಿಂದ ಜುಲೈ 3 ರವರೆಗೆ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೊ ತಿಳಿಸಿದ್ದಾರೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಮಡಿಕೇರಿ ಮತ್ತು ವೀರಾಜಪೇಟೆ ತಲಾ 8 ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 11 ಒಟ್ಟು 27 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 7,149 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3,562 ಬಾಲಕರು ಮತ್ತು 3,587 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದರು.

ಒಂದು ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲಾಗುತ್ತದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತಲಾ 2 ಮಾಸ್ಕ್ ಅನ್ನು ಒದಗಿಸಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ವಿವರಿಸಿದರು.

2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಮಡಿಕೇರಿಯಲ್ಲಿ 2081, ಸೋಮವಾರಪೇಟೆಯಲ್ಲಿ 2895, ವೀರಾಜಪೇಟೆಯಲ್ಲಿ 2173, ಒಟ್ಟು 7,149 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಚ್ಚಾಡೋ ಮಾಹಿತಿ ನೀಡಿದ್ದಾರೆ.

ಮೂರು ತಾಲೂಕಿನಲ್ಲಿ ತಲಾ 2 ಮೀಸಲು ಕೇಂದ್ರಗಳಿದ್ದು, ಮಡಿಕೇರಿ 2, ಸೋಮವಾರಪೇಟೆ 2 ಮತ್ತು ವೀರಾಜಪೇಟೆಯಲ್ಲಿ 2. ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ತಲುಪಲು ಸೂಕ್ತ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಶಾಲಾ ವಾಹನದಲ್ಲಿ ಬರುವ ವಿದ್ಯಾರ್ಥಿಗಳು ಮಡಿಕೇರಿ 408, ವೀರಾಜಪೇಟೆ 390, ಸೋಮವಾರಪೇಟೆ 380 ಒಟ್ಟು 1178. ನಡಿಗೆ/ಬೈಸಿಕಲ್‍ನಲ್ಲಿ ಬರುವ ವಿದ್ಯಾರ್ಥಿಗಳು ಮಡಿಕೇರಿ 600, ವೀರಾಜಪೇಟೆ 269, ವೀರಾಜಪೇಟೆ: ಎಸ್.ಎಸ್. ಎಲ್.ಸಿ ಪರೀಕ್ಷೆ ಸುಗಮವಾಗಿ ಹಾಗೂ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ವೀರಾಜಪೇಟೆಯ ಮಿನಿ ವಿಧಾನಸೌಧದಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ನೇತೃತ್ವದಲ್ಲಿ ಪರೀಕ್ಷೆ ಸಿದ್ಧತೆಗಳ ಪರಿಶೀಲನಾ ಸಭೆಯನ್ನು ನಡೆಯಿತು.

ಸಭೆಯ ಮೊದಲಿಗೆ ವೀರಾಜಪೇಟೆ ತಾಲೂಕಿನ 8 ಪರೀಕ್ಷಾ ಕೇಂದ್ರಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ, ಕೈಗೊಂಡಿರುವ ಸ್ವಚ್ಛತಾ ಕಾರ್ಯ, ಶೌಚಾಲಯ ಹಾಗೂ ಪರೀಕ್ಷಾ ಕೊಠಡಿಗಳ ಸ್ಯಾನಿಟೈಜ್ ಮಾಡಿರುವ ಕುರಿತು ಶಾಸಕರಿಗೆ ಮಾಹಿತಿ ನೀಡಿದರು.

ಮುಖ್ಯ ಶಿಕ್ಷಕರಿಂದ ಮಾಹಿತಿ ಪಡೆದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ ಎಲ್ಲರ ಮಾತುಗಳನ್ನು ಆಲಿಸಿದ ಬಳಿಕ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿದು ಬರುತ್ತಿದೆ. ವೀರಾಜಪೇಟೆ ತಾಲೂಕಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ವ್ಯವಸ್ಥೆ ಆಗಿದೆ ಆದರೆ ಎಲ್ಲಾ ವ್ಯವಸ್ಥೆಗಳು ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿಗಳಿಗೆ ಆನ್‍ಲೈನ್‍ನಲ್ಲಿ ತರಗತಿ ಮಾಡಲಾಗಿದೆ ಯಾದರೂ ಶ್ರೀಮಂಗಲ, ಬಿರುನಾಣಿ ಯಂತಹ ಜಾಗಗಳಲ್ಲಿ ಹಾಡಿಯಲ್ಲಿರುವ ಮಕ್ಕಳಿಗೆ ಇದೆಲ್ಲಾ ಎಷ್ಟರಮಟ್ಟಿಗೆ ತಲುಪಿರಬಹುದು ಎಂಬುದನ್ನು ಚಿಂತಿಸಬೇಕಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಚ್ಚಾಡೋ, ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಶ್ರೀಶೈಲ ಬಿಳಗಿ, ಜಿಲ್ಲಾ ಪಂಚಾಯಿತಿ ಸದಸ್ಯ ಶಶಿ ಸುಬ್ರಮಣಿ, ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಭವ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು, ವೀರಾಜಪೇಟೆಯ 8 ಪರೀಕ್ಷಾ ಕೇಂದ್ರಗಳ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು.

ಸೋಮವಾರಪೇಟೆ: ಎಸ್.ಎಸ್. ಎಲ್.ಸಿ. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥೈರ್ಯ ತುಂಬಲು ಕ್ರಮ ವಹಿಸಲಾಗಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ವೈರಸ್ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಹಿಂದಿನ ದಿನಗಳಂದು ಸ್ಯಾನಿಟೈಸ್ ಮಾಡಲಾಗುತ್ತದೆ. ಗೇಟ್ ಮುಂಭಾಗ ಆರೋಗ್ಯಾಧಿಕಾರಿ ಗಳಿಂದ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಎರಡು ಮಾಸ್ಕ್‍ಗಳನ್ನು ವಿತರಿಸಲಾಗಿದೆ.

ಪ್ರವೇಶ ಪತ್ರದ ಹಿಂಬದಿಯಲ್ಲಿ ಪರೀಕ್ಷಾ ಕೇಂದ್ರದ ಹೆಸರು, ಕೊಠಡಿ ಸಂಖ್ಯೆ ಹಾಗೂ ಬೇಂಚ್ ಕ್ರಮ ಸಂಖ್ಯೆಯನ್ನು ಬರೆಯಲಾಗಿದೆ ಎಂದು ವಿವರಿಸಿದರು. ವಿದ್ಯಾರ್ಥಿಗಳಿಗೆ ಪರೀಕ್ಷೆಗೂ ಮುನ್ನ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಸೂಚನೆ ನೀಡಲಾಗಿದೆ.

ಸ್ಕೌಟ್ ಮತ್ತು ಗೈಡ್ಸ್ ಶಿಕ್ಷಕರನ್ನು ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾಗಿದೆ ಎಂದರು. ಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು, ಕಚೇರಿ ವ್ಯವಸ್ಥಾಪಕ ಚನ್ನಪ್ಪ ಉಪಸ್ಥಿತರಿದ್ದರು.ಸೋಮವಾರಪೇಟೆ 1120 ಒಟ್ಟು 1989. ಪೋಷಕರು ಕರೆತರುವ ಮಕ್ಕಳ ಸಂಖ್ಯೆ ಮಡಿಕೇರಿ 535, ವೀರಾಜಪೇಟೆ 580, ಸೋಮವಾರ ಪೇಟೆ 981 ಒಟ್ಟು 2096, ಹಾಸ್ಟೆಲ್‍ನಲ್ಲಿ ಇರುವ ವಿದ್ಯಾರ್ಥಿಗಳ ಸಂಖ್ಯೆ ಮಡಿಕೇರಿ 117, ವೀರಾಜ ಪೇಟೆ 140, ಸೋಮವಾರಪೇಟೆ 110 ಒಟ್ಟು 367, ಕೆಎಸ್‍ಆರ್‍ಟಿಸಿ ಅಥವಾ ಬಾಡಿಗೆ ವಾಹನದಲ್ಲಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಮಡಿಕೇರಿ 949, ವೀರಾಜಪೇಟೆ 330, ಸೋಮವಾರಪೇಟೆ 240 ಒಟ್ಟು 1519. ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 7149.

ಮಡಿಕೇರಿಯಲ್ಲಿ 50, ಸೋಮವಾರಪೇಟೆ 58, ವೀರಾಜಪೇಟೆ 22 ವಿದ್ಯಾರ್ಥಿಗಳು ಹೊರ ಜಿಲ್ಲೆ/ ತಾಲೂಕುಗಳಿಂದ ಬಂದಿದ್ದಾರೆ. ಮಡಿಕೇರಿ 19, ಸೋಮವಾರಪೇಟೆ 47 ಮತ್ತು ವೀರಾಜಪೇಟೆಯಿಂದ 60 ವಿದ್ಯಾರ್ಥಿಗಳು ಹೊರ ಜಿಲ್ಲೆ/ ತಾಲೂಕುಗಳಿಗೆ ತೆರಳಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ

ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರವನ್ನು ಪರಿಚಯಿಸುವ ಸಲುವಾಗಿ ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಒಂದು ವಿಷಯದ ಪರೀಕ್ಷೆಯನ್ನು ಈಗಾಗಲೇ ವಾರ್ಷಿಕ ಪರೀಕ್ಷಾ ಕೇಂದ್ರದಲ್ಲಿಯೇ ನಡೆಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಯನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದೊಳಗೆ ಇತರರ ಪ್ರವೇಶವನ್ನು ನಿಷೇಧಿಸಲಾಗಿದೆ. ಪೋಷಕರು ಹಾಗೂ ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ. 9480695260 ಹಾಗೂ ಹರೀಶ್, ದೂ. 9980669032 ಸಂಪರ್ಕಿಸ ಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.