ನಾಪೆÇೀಕ್ಲು, ಜೂ. 23: ತಾ. 25ರಿಂದ ಜು. 3ರವರೆಗೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ನಾಪೆÇೀಕ್ಲು ಕ್ಲಸ್ಟರಿಗೆ ಒಳಪಟ್ಟ 9 ಪ್ರೌಢಶಾಲೆಗಳ ಒಟ್ಟು 401 ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 23 ಕೊಠಡಿಗಳನ್ನು ಸಿದ್ದಪಡಿಸಲಾಗಿದೆ. ಹೆಚ್ಚುವರಿ ಎರಡು ಕೊಠಡಿಗಳು, ಒಂದು ವಿಶ್ರಾಂತಿ ಕೊಠಡಿ ಹಾಗೂ ಒಂದು ವಿಶೇಷ ಕೊಠಡಿಯನ್ನು ಕಾಯ್ದಿರಿಸಲಾಗಿದೆ. ಆರು ವಲಸೆ ವಿದ್ಯಾರ್ಥಿಗಳಿದ್ದು, ಸ್ಥಳೀಯವಾಗಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿ ಪಿ.ಕೆ.ನಳಿನಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ವಿವಿಧ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಭೆ ನಡೆಸಲಾಯಿತು. ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವದು ಶಿಕ್ಷಣ ಇಲಾಖೆಯ ಸಿಬ್ಬಂದಿಗಳ ಜವಾಬ್ದಾರಿ. ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗುವಲ್ಲಿ ಯಾವದೇ ಅಡಚಣೆಗಳಾಗಬಾರದು. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಮುಖ್ಯಶಿಕ್ಷಕರಿಗೆ ಸೂಚಿಸಿದರು.

ಒಂದು ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲಾಗುತ್ತದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ತಲಾ ಎರಡು ಮಾಸ್ಕ್‍ಗಳನ್ನು ಒದಗಿಸಲಾಗಿದೆ. ಪರಿಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಪ್ರತಿ ಶಾಲೆಯ ವತಿಯಿಂದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪ್ರಪ್ರಥಮವಾಗಿ ಮಳೆಗಾಲದಲ್ಲಿ ಪರೀಕ್ಷೆ ನಡೆಯುತ್ತಿರುವದರಿಂದ ಪರೀಕ್ಷೆಗೆ ತೆರಳಲು ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಪರೀಕ್ಷಾ ಕೇಂದ್ರಕ್ಕೆ ಸಂಬಂಧಿಸಿದಂತೆ ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ, ಸೇಕ್ರೆಡ್ ಹಾಟ್ರ್ಸ್ ಆಂಗ್ಲ ಮಾಧ್ಯಮ ಶಾಲೆ, ಹೊದವಾಡ ಮತ್ತು ಎಮ್ಮೆಮಾಡು ಸರ್ಕಾರಿ ಪ್ರೌಢಶಾಲೆ, ಬಲ್ಲಮಾವಟಿ, ಕಕ್ಕಬ್ಬೆ, ನರಿಯಂದಡ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.