ಕೂಡಿಗೆ, ಜೂ.23: ಸರಕಾರವು ಜಾರಿಗೆ ತಂದಿರುವ ವಿವಿಧ ಯೋಜನೆಗಳ ಸ್ಯೌಲಭ್ಯಗಳನ್ನು ರೈತರು ಪಡೆದುಕೊಂಡು ತಮ್ಮ ಅರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದು ಮಡಿಕೇರಿ ಕ್ಷೇತ್ರ ಶಾಸಕ ಎಂ ಪಿ. ಅಪ್ಪಚ್ಚು ರಂಜನ್ ತಿಳಿಸಿದರು

ಅವರು ಹಾರಂಗಿಯಲ್ಲಿರುವ ಮಾದರಿ ತೋಟಗಾರಿಕಾ ಕ್ಷೇತ್ರದಲ್ಲಿ ಬೆಳೆಸಲಾದ ತೆಂಗಿನ ಗಿಡಗಳನ್ನು ವಿತರಣೆ ಮಾಡಿ ಮಾತನಾಡಿದರು. ನಂತರ ಮಾತನಾಡುತ್ತಾ ರೈತರು ಸರ್ಕಾರದ ಸವಲತ್ತುಗಳನ್ನು ಪಡೆಯಲು ವಿವಿಧ ಯೋಜನೆಗಳು ಇವೆ ಅವುಗಳ ಮಾಹಿತಿಯನ್ನು ಗ್ರಾಮಾಂತರ ಪ್ರದೇಶದ ಜನರು ತಿಳಿದುಕೊಂಡು ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಹಾರಂಗಿ ಮಾದರಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವರದರಾಜ್ ಮಾದರಿ ತೋಟದಲ್ಲಿ ಬೆಳೆಸಲಾದ ತಳಿಗಳ ಬಗ್ಗೆ ಮಾಹಿತಿ ನೀಡಿದರು.

ಕ್ಷೇತ್ರದಲ್ಲಿ ಈಗಾಗಲೇ ಎರಡು ಎಕರೆ ಪ್ರದೇಶದಲ್ಲಿ ದೃಢೀಕರಣಗೊಂಡ 10,530 ತೆಂಗಿನ ಗಿಡಗಳನ್ನು ರೈತರಿಗೆ ರಿಯಾಯಿತಿ ದರದಲ್ಲಿ ಅವರ ಜಮೀನಿನ ದಾಖಲಾತಿ ಮತ್ತು ಆಧಾರ್ ಕಾರ್ಡ್ ನೊಂದಿಗೆ ಒಬ್ಬ ರೈತರಿಗೆ ಒಂದು ಎಕರೆಗೆ 60 ಗಿಡಗಳನ್ನು ರಿಯಾಯಿತಿ ಬೆಲೆಯಾಗಿ ರೂ 60 ನಂತೆ ವಿತರಣೆ ಮಾಡಲಾಗುವುದು ಎಂದು ಸಹಾಯಕ ತೋಟಗಾರಿಕೆ ನಿರ್ದೇಶಕ. ವರದರಾಜ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯ ಭರತ್ ಮಾಚಯ್ಯ, ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯ ಬಾಸ್ಕರ್ ನಾಯಕ್ ಸ್ವಾಮಿ ಸೇರಿದಂತೆ ಅನೇಕ ರೈತರು ತೆಂಗಿನ ಗಿಡಗಳನ್ನು ಪಡೆದುಕೊಂಡರು.