ಸುಂಟಿಕೊಪ್ಪ, ಜೂ. 24: ಗ್ರಾಮ ಪಂಚಾಯಿತಿ ವತಿಯಿಂದ ಶೇ. 5ರ ನಿಧಿಯಿಂದ ವಿಶೇಷಚೇತನರಿಗೆ 12 ಸಿಂಥೆಟಿಕ್ ನೀರಿನ ಟ್ಯಾಂಕ್ ಮತ್ತು ಶೇ 25 ನಿಧಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ 20 ಹೊಲಿಗೆ ಯಂತ್ರಗಳÀನ್ನು ಹಾಗೂ ಪಂಚಾಯಿತಿ ಪೌರ ಕಾರ್ಮಿಕರಿಗೆ ರೈನ್ ಕೋಟು, ಗ್ಲೌಸ್ನ್ನು ಶಾಸಕ ಅಪ್ಪಚ್ಚು ರಂಜನ್ ವಿತರಿಸಿದರು.
ನಂತರ ಮಾತನಾಡಿದ ಅವರು, ಸರಕಾರ ಬಡವರಿಗೆ ಹಲವಾರು ಸೌಲಭ್ಯವನ್ನು ನೀಡುತ್ತಿದ್ದು ಇದರ ಸದುಪಯೋಗ ಪಡೆದು ಇದನ್ನು ಬೇರೆಯವರಿಗೆ ಮಾರಾಟ ಮಾಡದೆ ಬಳಸಿಕೊಂಡು ನೆಮ್ಮದಿಯ ಜೀವನ ನಡೆಸಿ ಎಂದರು. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷೆ ರೋಸ್ಮೇರಿ ರಾಡ್ರಿಗಸ್, ಉಪಾಧ್ಯಕ್ಷ ಪಿ.ಆರ್. ಸುಕುಮಾರ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಪಂಚಾಯಿತಿ ಸಿಬ್ಬಂದಿಗಳು ಸರ್ವ ಸದಸ್ಯರು ಮತ್ತು ಫಲಾನುಭವಿಗಳು ಹಾಜರಿದ್ದರು.