ನಾಪೆÇೀಕ್ಲು, ಜೂ. 24: ಕಕ್ಕಬೆ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಶಿಕ್ಷಕ ಎ.ಟಿ. ಸುಬ್ರಮಣಿ ಅವರು ನಿವೃತ್ತಿ ಹೊಂದಿದ ಹಿನ್ನೆಲೆ ಕಕ್ಕಬೆ-ಕುಂಜಿಲ ಗ್ರಾಮ ಪಂಚಾಯಿತಿ ವತಿಯಿಂದ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು. ಈ ಸಂದರ್ಭ ಕಕ್ಕಬೆ-ಕುಂಜಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರ್ತಂಡ ಶೈಲಾ ಕುಟ್ಟಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಂಸ, ಪ್ರಬಾರ ಮುಖ್ಯ ಶಿಕ್ಷಕಿ ಮಾಲತಿ, ಸಹ ಶಿಕ್ಷಕಿ ರಸೀನಾ ಮತ್ತಿತರರು ಇದ್ದರು.