ಕುಶಾಲನಗರ, ಜೂ .24: ಕುಶಾಲನಗರ ಸಮೀಪದ ಬೈಲುಕೊಪ್ಪೆ ಟಿಬೇಟಿಯನ್ ನಿರಾಶ್ರಿತರ ಶಿಬಿರದಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಕುಟುಂಬ ಸದಸ್ಯರ ಕೋವಿಡ್-19 ವರದಿ ನೆಗೆಟಿವ್ ಬಂದಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ದೆಹಲಿಯಿಂದ ಬೈಲುಕೊಪ್ಪೆಗೆ ಆಗಮಿಸಿದ ನಾಲ್ವರಲ್ಲಿ ಓರ್ವ ಯುವಕನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.
ಈ ಹಿನ್ನೆಲೆಯಲ್ಲಿ ಆತನ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 19 ಜನರನ್ನು ಕ್ವಾರಂಟೈನ್ಗೆ ಒಳಪಡಿಸಿರುವುದಾಗಿ ಮೂಲಗಳು ತಿಳಿಸಿವೆ.