ಸುಂಟಿಕೊಪ್ಪ, ಜೂ. 24: ಕೇಂದ್ರ ಸರ್ಕಾರದ ಆತ್ಮನಿರ್ಭರ ಪಲಾನುಭವಿಗಳ ವರ್ಚ್‍ವಲ್ ಸಭೆಯನ್ನು ಸುಂಟಿಕೊಪ್ಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಸಲಾಯಿತು. ನಗರ ಬಿಜೆಪಿ ಅಧ್ಯಕ್ಷ ಪಿ.ಆರ್. ಸುನಿಲ್‍ಕುಮಾರ್ ಸಮ್ಮುಖದಲ್ಲಿ ಪ್ರಮುಖರು ಹಾಗೂ ಕಾರ್ಯಕರ್ತರು ವೀಕ್ಷಣೆ ಮಾಡಿದರು. ಇದರಿಂದ ಮಾಹಿತಿಯನ್ನು ಪಡೆದುಕೊಂಡಿದ್ದು, ಪ್ರತಿ ಗ್ರಾಮಗಳಿಗೂ ತೆರಳಿ ಸಾಮಾನ್ಯ ಜನತೆಯಲ್ಲಿ ಮಾಹಿತಿ ನೀಡಿ ಇದರ ಸದುಪಯೋಗವನ್ನು ಪಡೆಯಲು ನಿಕಟಪೂರ್ವ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ವಿಮಲಾವತಿ, ಪಕ್ಷದ ಹಿರಿಯ ಮುಖಂಡರುಗಳಾದ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಎಂ.ಎನ್. ಕೊಮೊರಪ್ಪ, ಘಟಕದ ಅಧ್ಯಕ್ಷ ದಾಸಂಡ ರಮೇಶ್, ಮಾಜಿ ಗ್ರಾ.ಪಂ. ಅಧ್ಯಕ್ಷ ಡಾ. ಶಶಿಕಾಂತ ರೈ, ಕೆದಕಲ್ ಗ್ರಾ.ಪಂ. ಮಾಜಿ ಅಧ್ಯಕ್ಷ ಸೋಮಯ್ಯ, ಗೌತಮ್ ಗೌಡ, ನಗರ ಕಾರ್ಯದರ್ಶಿ ಪ್ರಶಾಂತ್, ವಾಸು ಮತ್ತಿತರರು ಇದ್ದರು.