ಶನಿವಾರಸಂತೆ, ಜೂ. 26: ಭಾರದ ವಸ್ತುಗಳನ್ನು ತುಂಬಿಸಿಕೊಂಡು ಸಾರ್ವಜನಿಕ ರಸ್ತೆಯಲ್ಲಿ ಚಲಿಸುವ ವಾಹನಗಳ ಸಂಚಾರವನ್ನು ನಿಷೇಧ ಮಾಡಿದ ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘನೆ ಮಾಡಿದ ಲಾರಿ (ಕೆಎ-14, ಎ-3613) ಮಾಲೀಕನಿಗೆ ಮಡಿಕೇರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ರೂ. 13,300 ದಂಡ ವಿಧಿಸಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯ ಪ್ರಭಾರ ಠಾಣಾಧಿಕಾರಿ ಹೆಚ್.ಎಂ. ಗೋವಿಂದ್ ಹಾಗೂ ಸಿಬ್ಬಂದಿಗಳು ಇಲಾಖಾ ಜೀಪಿನಲ್ಲಿ ಗಸ್ತಿನಲ್ಲಿರುವಾಗ ಗುಡುಗಳಲೆ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಸಿಲ್ವರ್ ಮರದ ದಿಮ್ಮಿಗಳನ್ನು ಲಾರಿಯಲ್ಲಿ ತುಂಬಿಸಿಕೊಂಡು ಹೊರಜಿಲ್ಲೆಗೆ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿತ್ತು. ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿಗೆ ವರದಿ ಸಲ್ಲಿಸಲಾಗಿ, ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘನೆ ಮಾಡಿದ ಲಾರಿ ಮಾಲಿಕ ಕೆ.ಎ ಉಮ್ಮರ್ಗೆ ರೂ. 13,300 ದಂಡ ವಿಧಿಸಿದ್ದಾರೆ.