ಮಡಿಕೇರಿ, ಜೂ. 26: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ಸುಮನ್ ಡಿ.ಪಿ. ಅವರನ್ನು ವರ್ಗಾವಣೆಗೊಳಿಸಿರುವ ಸರ್ಕಾರ ಬೆಂಗಳೂರು ಸಿ.ಎ.ಆರ್. ಕೇಂದ್ರ ಸ್ಥಾನದ ಡಿಸಿಪಿಯಾಗಿ ನಿಯೋಜಿಸಿದೆ. ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬೆಂಗಳೂರು ಸಿಐಡಿ ವಿಭಾಗದಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕ್ಷಮ ಮಿಶ್ರಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.