ಮಡಿಕೇರಿ, ಜೂ. 26: ಕೊಡಗು ಫಾರ್ ಟುಮಾರೊ ಸಂಘಟನೆಯಿಂದ ತಾ. 27 ರಂದು (ಇಂದು) ಮಾದಾಪುರದ ಡಿ. ಚೆನ್ನಮ್ಮ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಗಿಡ ನೆಡುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕೋವಿಡ್ - 19 ರ ಪ್ರಕರಣ ಹೆಚ್ಚಾಗುತ್ತಿರುವ ಸಮಸ್ಯೆಯ ಕಾರಣದಿಂದಾಗಿ ಈ ಉದ್ದೇಶಿತ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕದ ಬಗ್ಗೆ ಮಾಹಿತಿ ನೀಡಲಾಗುವದು ಎಂದು ಸಂಘಟನೆ ಪ್ರಮುಖರು ತಿಳಿಸಿದ್ದಾರೆ.