ಕೂಡಿಗೆ, ಜೂ. 25: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದ ಗ್ರಾಮಸ್ಥರು ತಮ್ಮ ಗ್ರಾಮದ ಒಳಗಡೆ ಯಾವುದೆ ವಾಹನಗಳು ಬಾರದಂತೆ ಸ್ವತಃ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಮೂಲಕ ಕೊರೊನಾ ವೈರಸ್ ತಡೆಯಲು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಈ ಪುನರ್ವಸತಿ ಕೇಂದ್ರದ ಒಳಗಡೆ ವ್ಯಾಪಾರಕ್ಕೆ ಯಾವುದೇ ವಾಹನಗಳು ಬಾರದಂತೆ ರಸ್ತೆಗೆ ಕಲ್ಲುಗಳನ್ನು ಇಡಲಾಗಿದೆ. ಅಲ್ಲದೆ ಅಲ್ಲಿನ ಗ್ರಾಮಸ್ಥರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ, ವೈದ್ಯಾದಿಕಾರಿಗಳ ಮಾಹಿತಿಯನ್ನು ಸಮರ್ಪಕವಾಗಿ ಪಡೆದುಕೊಳ್ಳಲು ಮುಂದಾಗಿದ್ದಾರೆ.