ಕುಶಾಲನಗರ, ಜೂ. 25: ಕುಶಾಲನಗರ ಸಮೀಪದ ಕೊಪ್ಪ ಗ್ರಾಮದಲ್ಲಿ ಮುಖ್ಯರಸ್ತೆಯಿಂದ ಗುಡ್ಡೇನಹಳ್ಳಿಗೆ ತೆರಳುವ ರಸ್ತೆ ಗುಂಡಿಗಳಿಂದ ಕೂಡಿದ್ದು, ನಾಗರಿಕರಿಗೆ ಓಡಾಟಕ್ಕೆ ಅನಾನುಕೂಲ ಉಂಟಾಗಿದೆ ಎಂದು ಈ ಭಾಗದ ಜನರು ದೂರಿದ್ದಾರೆ. ನಳಂದ ಶಿಕ್ಷಣ ಸಂಸ್ಥೆ ಮತ್ತು ಈ ಭಾಗದ ದೇವಸ್ಥಾನಗಳು ಇದ್ದು, ಸುತ್ತಮುತ್ತಲೂ ಹಲವಾರು ಬಡಾವಣೆಗಳಲ್ಲಿ ನೂರಾರು ಮನೆಗಳಿಗೆ ತೆರಳಲು ವಾಹನ ಸಂಚಾರಕ್ಕೆ ಕೂಡ ಕಷ್ಟಕರವಾಗಿದೆ. ರಸ್ತೆಯಲ್ಲಿ ಅಲ್ಲಲ್ಲಿ ನೀರು ತುಂಬಿ ಓಡಾಟಕ್ಕೆ ಸಮಸ್ಯೆಯುಂಟಾಗಿದೆ.

ಕಳೆದ ಹಲವು ವರ್ಷಗಳಿಂದ ಈ ರಸ್ತೆ ನಿರ್ವಹಣೆ ಮಾಡದೆ ಇರುವ ಬಗ್ಗೆ ಸ್ಥಳೀಯ ಪಂಚಾಯ್ತಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ನಾಗರಿಕರು ತಿಳಿಸಿದ್ದಾರೆ. ತಕ್ಷಣ ರಸ್ತೆಯನ್ನು ಸರಿಪಡಿಸುವಂತೆ ಪತ್ರಿಕೆ ಮೂಲಕ ಕೋರಿದ್ದಾರೆ.