ಮಡಿಕೇರಿ. ಜು. 25.ಕೊಡಗು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಪ್ರವಾಸಿಗರಿಗೆ ವಾಸ್ತವ್ಯ ಕಲ್ಪಿಸದಿರಲು ಜಿಲ್ಲಾ ಹೊಟೇಲ್, ರೆಸಾಟ್ರ್ಸ್ ಹಾಗೂ ಹೋಂಸ್ಟೇಗಳು ತೀರ್ಮಾನ ಕೈಗೊಂಡಿವೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಹೊಟೇಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಎಸೋಸಿಯೇಶನ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಹಾಗೂ ಹೋಂಸ್ಟೇ ಅಸೋಸಿ ಯೇಷÀನ್ ಅಧ್ಯಕ್ಷ ಬಿ.ಜಿ. ಅನಂತಶಯನ ಇವರುಗಳು, ಸರಕಾರ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಿದ್ದರೂ, ಜಿಲ್ಲೆಯ ಹಿತದೃಷ್ಟಿ ಯಿಂದ ಮುಂದಿನ 21 ದಿನಗಳ ಕಾಲ ಪ್ರವಾಸಿಗರಿಗೆ ವಾಸ್ತವ್ಯ ಒದಗಿಸದೆ ಇರಲು ತೀರ್ಮಾನಿಸಿದ್ದು; ಸಂಸ್ಥೆಗಳ ಸದಸ್ಯರು ತೀರ್ಮಾನಕ್ಕೆ ಕೈಜೋಡಿಸು ವಂತೆ ಮನವಿ ಮಾಡಿದ್ದಾರೆ.
ಜೂನ್ 8ರಿಂದ ಪ್ರವಾಸೋದ್ಯಮ ಕ್ಷೇತ್ರವನ್ನು ತೆರೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುಮತಿ ನೀಡಿದ್ದರೂ, ಜಿಲ್ಲೆಯಲ್ಲಿ ಶೇಕಡ 98ರಷ್ಟು ರೆಸಾರ್ಟ್, ವಸತಿಗೃಹಗಳು ಹಾಗೂ ಹೋಂಸ್ಟೇಗಳು ಕಾರ್ಯನಿರ್ವಹಿಸದೆ ಜನತೆಯ ಭಾವನೆಗಳಿಗೆ ಬೆಲೆ ಕೊಟ್ಟಿರುವುದನ್ನು ಸ್ಮರಿಸಿರುವ ಅಧ್ಯಕ್ಷರುಗಳು, ಕಾನೂನಾತ್ಮಕವಾಗಿ ತಮ್ಮ ವೃತ್ತಿಯನ್ನು ಮುಂದುವರಿಸಬಹುದಾದರೂ ಜಿಲ್ಲೆಯ ಜನತೆಯ ಆರೋಗ್ಯ ಹಾಗೂ ಭಾವನೆಗಳಿಗೆ ಸಂಸ್ಥೆಯ ಪದಾಧಿಕಾರಿ ಗಳು ಗೌರವ ನೀಡಿ ಮೇಲಿನ ತೀರ್ಮಾನ ಕೈಗೊಂಡಿ ರುವುದಾಗಿ ಸ್ಪಷ್ಟಪಡಿಸಿದ್ದಾರೆ. ನೋಂದಾಯಿತ ಸಂಸ್ಥೆಗಳು ಮುಚ್ಚಲ್ಪಟ್ಟರೂ, ಅನಧಿಕೃತ ಹೋಂಸ್ಟೇ ಹಾಗೂ ವಸತಿಗೃಹಗಳು ಅತಿಥಿಗಳಿಗೆ ವಾಸ್ತವ್ಯ ನೀಡಿದರೆ ಆಯಾ ಊರಿನ ನಾಗರಿಕರು ಜಿಲ್ಲಾಡಳಿತದ ಗಮನ ಸೆಳೆಯು ವಂತೆಯೂ ಮನವಿ ಮಾಡಿದ್ದು; ಪ್ರವಾಸೋದ್ಯಮ ಇಲಾಖೆ ಕೂಡ ಈ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.
ಕೆಲದಿನಗಳ ಕಾಲ ಪ್ರವಾ ಸೋದ್ಯಮ ಕ್ಷೇತ್ರವನ್ನು ಮುಚ್ಚಲು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕೂಡ ದೂರವಾಣಿ ಮೂಲಕ ಮನವಿ ಮಾಡಿದ್ದನ್ನು ಅಧ್ಯಕ್ಷರುಗಳು ಜ್ಞಾಪಿಸಿಕೊಂಡಿದ್ದಾರೆ.
ವಾಸ್ತವ್ಯ ಕೇಂದ್ರಗಳು ಮುಂದಿನ 21 ದಿನಗಳವರೆಗೆ ಮುಚ್ಚಲ್ಪಟ್ಟರೂ ಕೂಡ ಸರಕಾರ ಅನುಮತಿ ನೀಡಿರುವ ರೆಸ್ಟೋರೆಂಟ್‍ಗಳು ಎಂದಿನಂತೆ ಸರಕಾರದ ನಿಯಮಗಳನ್ನು ಪಾಲಿಸಿ ಕಾರ್ಯನಿರ್ವಹಿಸಲಿವೆ ಎಂದು ನಾಗೇಂದ್ರಪ್ರಸಾದ್ ಮಾಹಿತಿ ನೀಡಿದ್ದಾರೆ.
ಕೆಲಸ ಸ್ಥಗಿತಕ್ಕೆ ನಿರ್ಧಾರ
ಕುಶಾಲನಗರ: ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣದಿಂದ ಕುಶಾಲನಗರ ವಕ್ರ್ಸ್ ಶಾಪ್ ಕಾರ್ಮಿಕ ಸಂಘ ತಾ. 26 ರಿಂದ (ಇಂದಿನಿಂದ) ಜುಲೈ ತಾ. 5ರ ತನಕ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸುವಂತೆ ತೀರ್ಮಾನಕೈಗೊಂಡಿದೆ. ಈ ಬಗ್ಗೆ ಸಂಘದ ಅಧ್ಯಕ್ಷರು, ಕಾರ್ಯಕಾರಿ ಮಂಡಳಿ ಹಾಗೂ ಸದಸ್ಯರೊಂದಿಗೆ, ಚರ್ಚಿಸಿ ತೀರ್ಮಾನವನ್ನು ಕೈಗೊಂಡಿರುವುದಾಗಿ ಪ್ರಕಟಣೆ ತಿಳಿಸಿದೆ.
ಸವಿತಾ ಸಮಾಜ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕು ಸವಿತಾ ಸಮಾಜದ ಸಭೆಯನ್ನು ತಾಲೂಕು ಅಧ್ಯಕ್ಷ ಮಧು ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆದು ಒಮ್ಮತದ ತೀರ್ಮಾನದೊಂದಿಗೆ; ತಾ. 25 ರಿಂದ 30ರ ವರೆಗೆ ಸ್ವಯಂ ಪ್ರೇರಿತವಾಗಿ ಮಡಿಕೇರಿ ತಾಲೂಕಿನಾದ್ಯಂತ ಎಲ್ಲಾ ಸಲೂನ್ ಶಾಪ್‍ಗಳನ್ನು ಬಂದ್ ಮಾಡಲು ತೀರ್ಮಾನಿಸಿದ್ದು, ಹೋಂ ಸರ್ವಿಸ್ ಸಹ ಇರುವುದಿಲ್ಲ ಹಾಗಾಗಿ ಗ್ರಾಹಕರು ಸಹಕರಿಸಬೇಕಾಗಿ ಸವಿತಾ ಸಮಾಜ ಕೋರಿದೆ.
ವೀರಾಜಪೇಟೆ: ವೀರಾಜಪೇಟೆ ತಾಲೂಕಿನಾದ್ಯಂತ ಸಲೂನ್ ಹಾಗೂ ಬ್ಯೂಟಿ ಪಾರ್ಲರ್ ಮಳಿಗೆಗಳನ್ನು ಸ್ವಯಂ ಪ್ರೇರಿತವಾಗಿ ತಾ. 25 ರಿಂದ 30ರ ತನಕ ಮುಚ್ಚುವುದಾಗಿ ಸಂಘದ ಅಧ್ಯಕ್ಷ ಕೆ.ಟಿ. ವೆಂಕಟೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡ್ಲಿಪೇಟೆ: ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಸವಿತಾ ಸಮಾಜ ಸಮಿತಿಯು ಕ್ಷೌರಿಕ ಅಂಗಡಿಗಳನ್ನು ಜುಲೈ 1ನೇ ತಾರೀಕಿನವರೆಗೆ ತೆರೆಯದಿರಲು ತೀರ್ಮಾನಿಸಿರುವುದಾಗಿ ಸವಿತಾ ಸಮಾಜದ ಕಾರ್ಯದರ್ಶಿ ರಾಮಕೃಷ್ಣ ತಿಳಿಸಿದ್ದಾರೆ.