ಗುಡ್ಡೆಹೊಸೂರು, ಜೂ. 25: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ಕೊರೊನಾ ಮತ್ತು ಇತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಸಲುವಾಗಿ ಪಂಚಾಯ್ತಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಔಷಧಿಯನ್ನು ಸಿಂಪಡಿಸಲಾಯಿತು. ಗುಡ್ಡೆಹೊಸೂರು ವೃತ್ತದ ಬಳಿ ಮತ್ತು ವಿವಿಧ ಭಾಗಗಳಲ್ಲಿ ಪಿ.ಡಿ.ಓ ಶ್ಯಾಂ ಅವರ ಸಮ್ಮುಖದಲ್ಲಿ ನಡೆಸಲಾಯಿತು. ಕುಶಾಲನಗರ ಮತ್ತು ಗುಡ್ಡೆಹೊಸೂರು ಭಾಗಗಳಲ್ಲಿ ಡೆಂಗ್ಯೂ ಮತ್ತು ಇತರ ಸಾಂಕ್ರಾಮಿಕ ಕಾಯಿಲೆಗಳು ಅಧಿಕವಾಗುತ್ತಿದ್ದು, ಸಾರ್ವಜನಿಕರು

ಶುಚಿತ್ವವನ್ನು ಕಾಪಾಡುವಂತೆ ಪಿ.ಡಿ.ಓ ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು. ಪ್ರತಿಯೊಬ್ಬರು ಮಾಸ್ಕ್ ತಪ್ಪದೆ ಹಾಕಬೇಕಾಗಿದೆ, ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ವ್ಯವಹಾರ ನಡೆಸಬೇಕಾಗಿದೆ ಎಂದು ಹೇಳಿದರು.