ಮಡಿಕೇರಿ, ಜೂ. 26: ಕೊರೊನಾ ವೈರಸ್ ಜಿಲ್ಲೆಯಾದ್ಯಂತ ಹರಡುತ್ತಿರುವ ಹಿನ್ನೆಲೆ ತಾ. 28ರಿಂದ ಮುಂದಿನ 15 ದಿನಗಳವರೆಗೆ ಬೆಳಿಗ್ಗೆ 8.30ರಿಂದ ಸಂಜೆ 6 ಗಂಟೆಯವರೆಗೆ ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಭಾಗಮಂಡಲ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ದೇವಸ್ಥಾನದ ದೈನಂದಿನ ಕಾರ್ಯಗಳು ಎಂದಿನಂತೆ ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.