ಸಿದ್ದಾಪುರ, ಜೂ 26: ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘನೆ ಮಾಡಿ ಮರ ಸಾಗಾಟ ಮಾಡುತ್ತಿದ್ದ ಮಿನಿ ಲಾರಿಯನ್ನು ಸಿದ್ದಾಪುರ ಠಾಣಾಧಿಕಾರಿ ಮೋಹನ್ರಾಜ್ ಮುಂದಾಳತ್ವದಲ್ಲಿ ವಶಕ್ಕೆ ಪಡೆಯಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಹೆಚ್ಚಿನ ಭಾರದ ವಸ್ತುಗಳನ್ನು ಸಾಗಾಟ ಮಾಡದಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದರೂ ಕೂಡ ಕೆಲವು ಲಾರಿಗಳಲ್ಲಿ ಮರಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮರ ಸಾಗಾಟ ಮಾಡುತ್ತಿದ್ದ ಮಿನಿ ಲಾರಿಯನ್ನು ಸಿದ್ದಾಪುರ ಪೊಲೀಸರು ವಶಕ್ಕೆ ಪಡೆದುಕೊಂಡು ಸಾರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.