ಮಡಿಕೇರಿ, ಜೂ. 25: ಪ್ರಸ್ತುತ ಜಿಲ್ಲಾ ಕೇಂದ್ರ ಮಡಿಕೇರಿಯೂ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾದಿಂದ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಚಟುವಟಿಕೆಗಳ ಕುರಿತಾಗಿ ಸಾಮೂಹಿಕವಾದ ಒಮ್ಮತದ ನಿರ್ಧಾರಕೈಗೊಳ್ಳುವ ಅಗತ್ಯವಿದೆ ಎಂದು ಜಿಲ್ಲಾ ಚೇಂಬರ್ ಅಧ್ಯಕ್ಷ ಎಂ.ಬಿ. ದೇವಯ್ಯ ಅವರು ಹೇಳಿದ್ದಾರೆ.ಶಕ್ತಿ’ಯೊಂದಿಗೆ ಈ ಕುರಿತು ತಮ್ಮ ನಿಲುವು ವ್ಯಕ್ತಪಡಿಸಿದ ಅವರು, ಈ ಬಗ್ಗೆ ಜಿಲ್ಲಾಡಳಿತ, ಚೇಂಬರ್‍ನ ಪದಾಧಿಕಾರಿಗಳು, ಜನಪ್ರತಿನಿಧಿಗಳನ್ನು ಒಳಗೊಂಡಂತೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರಬೇಕಿದೆ. ಕೊರೊನಾ ನಿಯಂತ್ರಣದ ಎಲ್ಲಾ ಕ್ರಮಗಳಿಗೆ ಪ್ರತಿಯೊಬ್ಬರು ಸಹಕಾರ ನೀಡಬೇಕಿರುವುದು ಅನಿವಾರ್ಯವಾಗಿದೆ. ಇಲ್ಲಿ ಯಾರೊಬ್ಬರ ವೈಯಕ್ತಿಕ ನಿರ್ಧಾರವಾಗಲಿ, ಪ್ರತಿಷ್ಠೆಯಾಗಲಿ ಸಮಂಜಸವಾಗದು.ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಗಮನಹರಿಸಬೇಕಿದ್ದು, ಸಹಕಾರ ನೀಡುವುದಾಗಿ ಹೇಳಿದ ದೇವಯ್ಯ ಅವರು, ವ್ಯಾಪಾರಸ್ಥರೂ ಅಗತ್ಯ ಮುಂಜಾಗ್ರತೆ ವಹಿಸಬೇಕೆಂದು ಹೇಳಿದರು.