ಪೆÇನ್ನಂಪೇಟೆ, ಜೂ. 28: ಅಲ್ಪಸಂಖ್ಯಾತ ಮುಖಂಡರನ್ನು ಸೇರಿದಂತೆ ಕಾಂಗ್ರೆಸ್ ಪ್ರಮುಖರನ್ನು ಗುರಿಯಾಗಿಸಿಕೊಂಡಿರುವ ಕೊಡಗು ಪೆÇಲೀಸರು, ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಈ ಕುರಿತು ಬೆಂಗಳೂರಿಗೆ ನಿಯೋಗ ತೆರಳಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆ.ಪಿ.ಸಿ.ಸಿ.) ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಎಂ.ಎ. ಉಸ್ಮಾನ್ ಅವರ ನೇತೃತ್ವದಲ್ಲಿ ತೆರಳಿದ ಪ್ರಮುಖರ ನಿಯೋಗ, ಮೊದಲು ಕೆ.ಪಿ.ಸಿ.ಸಿ. ಅಧ್ಯಕ್ಷರನ್ನು ಭೇಟಿ ಮಾಡಿ, ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿ ಕೊಂಡು ಪೆÇಲೀಸರು ಸುಳ್ಳು ಪ್ರಕರಣ ದಾಖಲಿಸಿ ಅವರ ಧ್ವನಿ ಅಡಗಿಸುವ ಪ್ರಯತ್ನದ ಕುರಿತು ಗಮನ ಸೆಳೆಯಿತು. ಮುಖ್ಯವಾಗಿ ವೀರಾಜಪೇಟೆ ಡಿವೈಎಸ್ಪಿ, ಕಾಂಗ್ರೆಸ್ ಮುಖಂಡರನ್ನು ಅನಗತ್ಯವಾಗಿ ಗುರಿಯಾಗಿಸಿಕೊಂಡು ಪಕ್ಷಪಾತ ದೋರಣೆ ಅನುಸರಿಸುತ್ತಿದ್ದಾರೆ ಎಂದು ನಿಯೋಗದಲ್ಲಿದ್ದ ಪ್ರಮುಖರು ಡಿ.ಕೆ. ಶಿವಕುಮಾರ್ ಬಳಿ ದೂರಿದರು.

ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ರಾಜ್ಯ ಪೆÇಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ರಾಜ್ಯ ಪೆÇಲೀಸ್ ಕೇಂದ್ರ ಕಚೇರಿಯಲ್ಲಿ ಭೇಟಿ ಮಾಡಿದ ಇದೇ ನಿಯೋಗ ಸಂಬಂಧಿಸಿದ ಪ್ರಕರಣಗಳ ಕುರಿತು ಮಾಹಿತಿ ಒದಗಿಸಿತು. ದೂರನ್ನು ಸ್ವೀಕರಿಸಿದ ರಾಜ್ಯ ಪೆÇಲೀಸ್ ಮಹಾ ನಿರ್ದೇಶಕರು, ಈ ಕುರಿತು ಸಂಬಂಧಿಸಿದವರಿಂದ ವರದಿ ತರಿಸಿ ಕೊಂಡು ಪರಿಶೀಲಿಸಲಾಗುವುದು ಎಂದರು. ನಂತರ ಈ ನಿಯೋಗ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಸೈಯದ್ ಅಹಮದ್ ಅವರನ್ನು ಭೇಟಿ ಮಾಡಿ ಪೆÇಲೀಸರಿಂದ ಕೊಡಗಿನಲ್ಲಿ ಅಲ್ಪಸಂಖ್ಯಾತರಿಗೆ ಆಗುತ್ತಿರುವ ಅನ್ಯಾಯಗಳ ಕುರಿತು ವಿವರಣೆ ನೀಡಿತು. ಕೆ.ಪಿ.ಸಿ.ಸಿ. ಅಧ್ಯಕ್ಷರ ಭೇಟಿ ಸಂದರ್ಭ ಕೆ.ಪಿ.ಸಿ.ಸಿ. ಕಾರ್ಯಾ ಧ್ಯಕ್ಷ ಸಲೀಂ ಅಹಮದ್, ಕೆ.ಪಿ.ಸಿ.ಸಿ. ಸಂಯೋಜಕ ಶಾಹಿದ್ ತೆಕ್ಕಿಲ್ ಉಪಸ್ಥಿತರಿದ್ದರು. ನಿಯೋಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಸೈಯ್ಯದ್ ಬಾವ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್ ಕೋಳುಮಂಡ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಖಲೀಲ್ ಬಾಷಾ, ಜಿಲ್ಲಾ ಸಂಯೋಜಕ ಅಬೂಬಕ್ಕರ್ ಕಡಂಗ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ ಇದ್ದರು.