ಸಿದ್ದಾಪುರ, ಜೂ. 27: ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘನೆ ಮಾಡಿ ಲಾರಿಯಲ್ಲಿ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಸಿದ್ದಾಪುರ ಪೆÇಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಭಾರದ ವಸ್ತುಗಳನ್ನು ತುಂಬಿಸಿಕೊಂಡು ಸಾರ್ವಜನಿಕ ರಸ್ತೆಯಲ್ಲಿ ಚಲಿಸುವ ವಾಹನಗಳ ಸಂಚಾರವನ್ನು ನಿಷೇಧ ಮಾಡಿದ್ದರೂ, ಸಾರ್ವಜನಿಕ ರಸ್ತೆಯಲ್ಲಿ ಸಿಲ್ವರ್ ಮರದ ದಿಮ್ಮಿಗಳನ್ನು ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಸಂದರ್ಭ ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿಗೆ ವರದಿ ಸಲ್ಲಿಸಿದ್ದಾರೆ. ಈಗಾಗಲೇ ಹಲವಾರು ವಾಹನಗಳು ಕಾನೂನು ಉಲ್ಲಂಘನೆ ಮಾಡಿ ಮರ ಸಾಗಾಟ ಮಾಡುತ್ತಿದ್ದ ಲಾರಿಗಳಿಗೆ ದಂಡ ವಿಧಿಸಲಾಗಿದೆ. ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘನೆ ಮಾಡಿ ಮರ ಸಾಗಾಟ ಮಾಡಿದ್ದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದೆಂದು ಠಾಣಾಧಿಕಾರಿ ಮೋಹನ್ರಾಜ್ ತಿಳಿಸಿದ್ದಾರೆ.