ಕುಶಾಲನಗರ, ಜೂ. 28: ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಕೆ.ಆರ್.ಕಿರಣ್ ಕುಮಾರ್ ಅವರನ್ನು ನಿಯೋಜಿಸಿ ಮಡಿಕೇರಿ ವಿಧಾನಸಭಾ ಕ್ಷೇತ್ರ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಹಾನಗಲ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಕುಶಾಲನಗರ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಎಚ್.ವಿ.ದೇವಪ್ಪ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಬದಲಾವಣೆಗೊಳಿಸಲಾಗಿದೆ.