ಮಡಿಕೇರಿ ಜೂ. 27 : ಕೊರೊನಾ ಸೋಂಕಿನಿಂದಾಗಿ ಕೊಡಗಿನಲ್ಲಿ ಸೀಲ್ ಡೌನ್ ಆದ ಪ್ರದೇಶದಲ್ಲಿ ಸಂಕಷ್ಟ ಎದುರಿಸುತ್ತಿರುವವರಿಗೆ ಸರ್ಕಾರದಿಂದಲೇ ಪಡಿತರ ಸಾಮಗ್ರಿ ಹಾಗೂ ಅಗತ್ಯ ವಸ್ತುಗಳನ್ನು ಉಚಿತವಾಗಿ ನೀಡಬೇಕು ಎಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಅಧ್ಯಕ್ಷ ಕೆ.ಎಂ.ಗಣೇಶ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೀಲ್‍ಡೌನ್ ಆದ ಪ್ರದೇಶದಲ್ಲಿ ಅನೇಕ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದ್ದು ಪಡಿತರ ಸಾಮಗ್ರಿಗಳಿಲ್ಲದೆ ಪರದಾಡುವಂತಾಗಿದೆ. ಆದ್ದರಿಂದ ಸರ್ಕಾರ ಸೀಲ್ ಡೌನ್ ಆದ ಪ್ರದೇಶಕ್ಕೆ ಪಡಿತರ ಸಾಮಗ್ರಿ ಹಾಗೂ ಅಗತ್ಯ ವಸ್ತುಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದರು.
ಅಧಿಕಾರಿಗಳು ಜವಾಬ್ದಾರಿ ಮರೆಯದೆ ನಿರ್ಬಂಧಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತಾಗಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ, ಯುವ ಘಟಕ ಪ್ರಧಾನ ಕಾರ್ಯದರ್ಶಿ ಜಾಸಿರ್, ಜಿಲ್ಲಾ ಕಾರ್ಯದರ್ಶಿ ಸುನೀಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬೊಳ್ಯಂಡ ಗಣೇಶ್ ಹಾಗೂ ಮಡಿಕೇರಿ ನಗರ ಎಸ್‍ಸಿ ಘಟಕದ ಅಧ್ಯಕ್ಷ ರವಿ ಕುಮಾರ್ ಉಪಸ್ಥಿತರಿದ್ದರು.