ಮಡಿಕೇರಿ, ಜೂ. 28: ಕೊಡಗು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಸುಮನ್ ಡಿ ಪನ್ನೇಕರ್ ಅವರು ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿ ಇದೀಗ ಬೆಂಗಳೂರು ಕೇಂದ್ರ ಸ್ಥಾನದ ಸಿ.ಎ.ಆರ್‍ನ ಡಿ.ಸಿ.ಪಿಯಾಗಿ ವರ್ಗಾವಣೆಯಾಗಿದ್ದು, ಅವರ ನಿಸ್ವಾರ್ಥ ಸೇವೆಯನ್ನು ಮನಗಂಡು ಮಡಿಕೇರಿಯ ಲಾರಿ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಶಿವ ಬೋಪಣ್ಣ, ಉಪಾಧ್ಯಕ್ಷ ಬಿ.ಜಿ. ಮೋಹನ್, ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಗಣೇಶ್, ಗೌರವಾಧ್ಯಕ್ಷ ತಿಮ್ಮಪ್ಪ ರೈ, ಸದಸ್ಯ ಕೆಂಚಪ್ಪ, ಇನ್ನಿತರ ಪ್ರಮುಖರ ಸಮ್ಮುಖದಲ್ಲಿ ಜಿಲ್ಲಾ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಿ, ಶುಭಕೋರಿದರು.