ಮಡಿಕೇರಿ, ಜೂ. 28: ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಕೊಡಗು ಜಿಲ್ಲೆ, ಮಡಿಕೇರಿ ಈ ಕಚೇರಿಯು ಎಸ್.ಜಿ.ಎಸ್.ವೈ. ಕಟ್ಟಡ, ಸುದರ್ಶನ್ ಸರ್ಕಲ್ ಹತ್ತಿರ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದು, ಈ ಕಚೇರಿಯನ್ನು ನೂತನ ಕೊಡಗು ಜಿಲ್ಲಾ ಪಂಚಾಯಿತಿ ಕಟ್ಟಡದ 1ನೇ ಮಹಡಿಗೆ ಸ್ಥಳಾಂತರಿಸಲಾಗಿದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.