ಕುಶಾಲನಗರ, ಜೂ. 28: ಜುಲೈ 2 ರಂದು ಡಿಕೆ ಶಿವಕುಮಾರ್ ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಹಿನೆÀ್ನಲೆಯಲ್ಲಿ ಪದಗ್ರಹಣ ಕಾರ್ಯಕ್ರಮ ಯಶಸ್ವಿಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಯಿತು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಗರ ಅಧ್ಯಕ್ಷ ಶರೀಫ್ ಇಬ್ರಾಹಿಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಗ್ರಹಣ ಕಾರ್ಯಕ್ರಮ ದಿನ ಕಾರ್ಯಕರ್ತರು ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಮುಖಂಡರು ಮಾಹಿತಿ ನೀಡಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ವೀಕ್ಷಕ ಮಂಜುಳಾ ರಾಜ್ ಮಾತನಾಡಿ, ಪದಗ್ರಹಣ ಕಾರ್ಯಕ್ರಮದಂದು ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿ ವಿನಂತಿಸಿದರು.

ಸಭೆಯಲ್ಲಿ ಇಂಟೆಕ್ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಂತಕುಮಾರ್, ಕಾರ್ಮಿಕ ಘಟಕದ ಪ್ರಮುಖ ಅಜ್ಜಳ್ಳಿ ರವಿ, ಪ್ರಮುಖರಾದ ಕೆ.ಎನ್.ಅಶೋಕ್, ಪ್ರದೀಪ್ ರೈ ಪಾಂಬಾರು, ಸುರೇಶ್, ಜನಾರ್ಧನ್, ದೇವ್, ತ್ರಿನೇಶ್, ಕಿಶೋರ್ ಕುಮಾರ್ ಇದ್ದರು.