ಮಡಿಕೇರಿ, ಜೂ. 27: ಕೊಡಗು ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಪೂರ್ವ ನಿಗಧಿಯಂತೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದರು. ಒಟ್ಟು 7038 ವಿದ್ಯಾರ್ಥಿಗಳು ಪ್ರವೇಶಪತ್ರ ಪಡೆದಿದ್ದರೂ, 348 ಮಂದಿ ಗೈರು ಹಾಜರಾಗಿದ್ದರು. ಉಳಿದಂತೆ 6690 ವಿದ್ಯಾರ್ಥಿಗಳು ಹಾಜರಾಗಿದ್ದರು.
ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಕೈಗೊಂಡಿದ್ದು, ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆಗಳು ಜಂಟಿಯಾಗಿ ಮಕ್ಕಳ ಹಿತ ಕಾಪಾಡುವಲ್ಲಿ ಶ್ರಮಿಸಿದ್ದಾಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಎಸ್. ಮಚ್ಚಾಡೊ ‘ಶಕ್ತಿ’ಯೊಂದಿಗೆ ತಿಳಿಸಿದರು. ಪರೀಕ್ಷೆ ಬರೆದು ಹಿಂತಿರುಗುವ ವೇಳೆ ಮಕ್ಕಳು ಮಳೆ ನಡುವೆ ನಗಮೊಗದಿಂದಲೇ ಸಾಗುತ್ತಿದ್ದ ಚಿತ್ರಣ ಎದುರಾಯಿತು.
199 ವಿದ್ಯಾರ್ಥಿಗಳು
ಶನಿವಾರಸಂತೆ ಪದವಿಪೂರ್ವ ಕಾಲೇಜು, ಭಾರತೀ ವಿದ್ಯಾಸಂಸ್ಥೆ ಪರೀಕ್ಷಾ ಕೇಂದ್ರದಲ್ಲಿ ಇಂದು ಎಸ್‍ಎಸ್‍ಎಲ್‍ಸಿಯ ಗಣಿತ ಪರೀಕ್ಷೆ ನಡೆಯಿತು.
ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಮಾಸ್ಕ್ ಧರಿಸಿ ಸ್ಯಾನಿಟೈಸರ್ ಬಳಸಿ ಥರ್ಮಲ್ ಸ್ಕ್ಯಾನ್ ಆದ ನಂತರ ಪರೀಕ್ಷಾ ಕೊಠಡಿಗೆ ಪ್ರವೇಶ ನೀಡಲಾಯಿತು. ಒಟ್ಟು 11 ಶಾಲೆಗಳ 199 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿರುತ್ತಾರೆ ಎಂದು ಮುಖ್ಯ ಅಧೀಕ್ಷಕ ಪಿ. ನರಸಿಂಹ ಮೂರ್ತಿ ತಿಳಿಸಿದ್ದಾರೆ.
ಡಿ.ಡಿ.ಪಿ.ಐ ಪರಿಶೀಲನೆ
ಶನಿವಾರಸಂತೆ ಹೋಬಳಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಭೀತಿ ಮತ್ತು ಇದೀಗ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶನಿವಾರಸಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೊ ಅವರು ಭೇಟಿ ನೀಡಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಪರೀಕ್ಷಾ ಕೇಂದ್ರದಲ್ಲಿ ಭದ್ರತೆ, ಸ್ಯಾನಿಟೈಸರ್ ಮುಂತಾದ ಮುಂಜಾಗ್ರತಾ ಕ್ರಮಗಳ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ಈ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೊರೊನಾ ಭೀತಿ ಎದುರಾಗದಂತೆ ನೋಡಿಕೊಳ್ಳಬೇಕು. ಸಾಮಾಜಿಕ ಅಂತರ, ವಿದ್ಯಾರ್ಥಿ, ಸಿಬ್ಬಂದಿಗಳು ಸ್ಯಾನಿಟೈಸರ್ ಬಳಸುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮುಂತಾದ ಮುಂಜಾಗ್ರತೆಯ ಕ್ರಮವನ್ನು ಅನುಸರಿಸಿ, ವಿದ್ಯಾರ್ಥಿಗಳು ಭೀತಿ ಮತ್ತು ಇದೀಗ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶನಿವಾರಸಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೊ ಅವರು ಭೇಟಿ ನೀಡಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಪರೀಕ್ಷಾ ಕೇಂದ್ರದಲ್ಲಿ ಭದ್ರತೆ, ಸ್ಯಾನಿಟೈಸರ್ ಮುಂತಾದ ಮುಂಜಾಗ್ರತಾ ಕ್ರಮಗಳ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ಈ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೊರೊನಾ ಭೀತಿ ಎದುರಾಗದಂತೆ ನೋಡಿಕೊಳ್ಳಬೇಕು. ಸಾಮಾಜಿಕ ಅಂತರ, ವಿದ್ಯಾರ್ಥಿ, ಸಿಬ್ಬಂದಿಗಳು ಸ್ಯಾನಿಟೈಸರ್ ಬಳಸುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮುಂತಾದ ಮುಂಜಾಗ್ರತೆಯ ಕ್ರಮವನ್ನು ಅನುಸರಿಸಿ, ವಿದ್ಯಾರ್ಥಿಗಳು