ಮಡಿಕೇರಿ, ಜೂ. 28: ಮುಂದಿನ ಜುಲೈ ಆರರವರೆಗೆ ರಾಜ್ಯಾದ್ಯಂತ ಖಾಸಗಿ ಬಸ್‍ಗಳನ್ನು ಓಡಿಸದಿರಲು ಖಾಸಗಿ ಬಸ್ ಮಾಲೀಕರ ಸಂಘದವರು ತೀರ್ಮಾನಿಸಿದ್ದಾರೆ.ಇಂದು ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯದ ಎಲ್ಲ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರ ಸಂಘದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈಗಾಗಲೇ ಸಂಘದ ಮೂಲಕ ಬಸ್‍ಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ ನೀಡಬೇಕೆಂದು ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅಲ್ಲದೆ ಇದೀಗ ದಿನದಿಂದ ದಿನಕ್ಕೆ ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇದರಿಂದಾಗಿ ಬಸ್‍ಗಳನ್ನು ಓಡಿಸಲು ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜುಲೈ 6ರ ಒಳಗಡೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದು, ಅಲ್ಲಿಯವರೆಗೆ ಬಸ್ ಗಳನ್ನು ಓಡಿಸದಂತೆ ತೀರ್ಮಾನಿ ಸಿರುವುದಾಗಿ ತಿಳಿದುಬಂದಿದೆ.