ಸುಂಟಿಕೊಪ್ಪ, ಜೂ. 28: ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾದರ್ ಎಡ್ವರ್ಡ್ ವಿಲಿಯಂ ಸಾಲ್ಡಾನ ಅವರಿಂದ ನೂತನ ಧರ್ಮಗುರು ಅರುಳ್ ಸೆಲ್ವಕುಮಾರ್ ಅಧಿಕಾರ ವಹಿಸಿಕೊಂಡರು.

ಸಂತ ಮೇರಿ ಶಾಲಾ ಸಭಾಂಗಣದಲ್ಲಿ ಕೂಡಿಗೆಯ ಧರ್ಮಗುರು ಫಾದರ್ ಜಾನ್ ಡಿ’ಕುನ್ನ ಅವರು ದಿವ್ಯ ಬಲಿಪೂಜೆಯನ್ನು ನೆರವೇರಿಸಿದರು. ಸಂತ ಅಂತೋಣಿ ದೇವಾಲಯದಲ್ಲಿ ಕಳೆದ ಆರೂವರೆ ವರ್ಷಗಳಿಂದ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ, ಫಾದರ್ ಎಡ್ವರ್ಡ್ ವಿಲಿಯಂ ಸಾಲ್ಡನಾ ಹೆಚ್‍ಡಿ ಕೋಟೆಯ ಸಂತ ಮರಿಯಮ್ಮ ಅವರ ದೇವಾಲಯಕ್ಕೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಚಾಮರಾಜನಗರದ ದೊಡ್ಡರಾಯಪೇಟೆಯ ಧರ್ಮಗುÀರುಗಳಾಗಿದ್ದ ಅರುಳ್ ಸೆಲ್ವಕುಮಾರ್ ಅವರನ್ನು ನೇಮಿಸಲಾಗಿದೆ.