ಮಡಿಕೇರಿ, ಜೂ. 27: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 4 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಬೆಂಗಳೂರು ಪ್ರಯಾಣದ ಇತಿಹಾಸವಿರುವ 33 ವಷರ್Àದ ಸ್ತ್ರೀಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರನ್ನು ನೇರವಾಗಿ ಕೊಡಗು ವೈದ್ಯಕೀಯ ಸಂಸ್ಥೆ ಅಧೀನದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಮಡಿಕೇರಿ ತಾಲೂಕು ಮೂರ್ನಾಡು ಬಳಿಯ ಸುಭಾಷïನಗರದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಅಲ್ಲದೆ ಕೊಡ್ಲಿಪೇಟೆ ಹೋಬಳಿ ಶಿರಂಗಾಲ ಗ್ರಾಮದ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 14 ವಷರ್Àದ ಹುಡುಗಿಗೆ ಮತ್ತು ಕುಶಾಲನಗರದ ಹುಲುಸೆ ಗ್ರಾಮದ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 8 ವಷರ್Àದ ಹುಡುಗನಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.ಇದರೊಂದಿಗೆ ಹೊಸದಾಗಿ ಮೂರ್ನಾಡುವಿನಲ್ಲಿ ನಿಯಂತ್ರಿತ ಪ್ರದೇಶವನ್ನು ಮಾಡಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. 3 ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿರುತ್ತಾರೆ.
(ಮೊದಲ ಪುಟದಿಂದ) 37 ಸಕ್ರಿಯ ಪ್ರಕರಣಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ ಒಟ್ಟು 19 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕುಶಾಲನಗರ: ಕುಶಾಲನಗರ ಪಟ್ಟಣದಲ್ಲಿ ಸೀಲ್ಡೌನ್ ಮಾಡಿರುವ ರಥಬೀದಿಯ ನಿವಾಸಿಗಳಿಗೆ ಆರೋಗ್ಯ ಇಲಾಖೆಯಿಂದ ತಪಾಸಣಾ ಕಾರ್ಯ ಮಾಡಲಾಯಿತು. ಸೋಂಕಿತನೊಂದಿಗೆ ಪ್ರಥಮ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆಹಾಕಲಾಯಿತು.
ಕೊರೊನಾ ಸೋಂಕಿತ ವ್ಯಕ್ತಿಯ ಕುಟುಂಬ ಸದಸ್ಯರು ಸೇರಿದಂತೆ ಆತನ ನಿಕಟ ಸಂಪರ್ಕ ಹೊಂದಿದ್ದವರು ಕಡ್ಡಾಯವಾಗಿ ಕ್ವಾರಂಟೈನ್ ನಿಯಮಗಳನ್ನು ಅನುಸರಿಸುವಂತೆ ಸೂಚಿಸಲಾಯಿತು. ರಥಬೀದಿ ಹೊರತುಪಡಿಸಿ ಕೆಲವು ವ್ಯಕ್ತಿಗಳು ಸೋಂಕಿತ ಯುವಕನೊಂದಿಗೆ ಸಂಪರ್ಕ ಹೊಂದಿರುವ ಮಾಹಿತಿ ಇದ್ದು ಅವರುಗಳು ಕಡ್ಡಾಯವಾಗಿ ಕ್ವಾರಂಟೈನ್ ನಿಯಮ ಪಾಲಿಸಬೇಕು. ಉಳಿದಂತೆ ಇತರ ನಿವಾಸಿಗಳ ಪೈಕಿ ವಯೋವೃದ್ಧರು, ಅನಾರೋಗ್ಯ ಪೀಡಿತರು, ಬಿಪಿ, ಶುಗರ್ ಮತ್ತಿತರ ಖಾಯಿಲೆ ಹೊಂದಿರುವ ಮಂದಿಯ ಬಗ್ಗೆ ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ಮಾಹಿತಿ ಪಡೆದುಕೊಂಡರು. ಸ್ಥಳದಲ್ಲೇ ಥರ್ಮಲ್ ಸ್ಕ್ಯಾನಿಂಗ್ ಮಾಡುವುದರೊಂದಿಗೆ ಗಂಟಲು ದ್ರವ ಪರೀಕ್ಷೆಗೆ ಒಳಪಡದವರು ಕೂಡಲೆ ಪರೀಕ್ಷೆಗೆ ಮುಂದಾಗುವಂತೆ ಸೂಚನೆ ನೀಡಲಾಯಿತು. ಕುಶಾಲನಗರ ಪಪಂ ವತಿಯಿಂದ ಅಗತ್ಯ ಮಾಹಿತಿ ಒಳಗೊಂಡ ಕರಪತ್ರಗಳನ್ನು ಹಂಚಲಾಯಿತು.
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ವಿಜಯೇಂದ್ರ ನೇತೃತ್ವದಲ್ಲಿ ಆರೋಗ್ಯ ಕಾರ್ಯಕರ್ತರಾದ ಗೌರಮ್ಮ, ಸುಶೀಲಾ, ಆಶಾ ಕಾರ್ಯಕರ್ತರಾದ ನಸ್ರೀಮ, ರಾಧಾವತಿ ಮತ್ತಿತರ ಇಲಾಖಾ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯದಲ್ಲಿ ತೊಡಗಿಸಿಕೊಂಡರು.
ಪಟ್ಟಣದ ರಥಬೀದಿಯ ನಿಯಂತ್ರಿತ ವಲಯದಲ್ಲಿ 71 ವೆಂಡರ್ಸ್ ಮೂಲಕ ಅಗತ್ಯ ವಸ್ತುಗಳನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಪ.ಪಂ. ಅಧಿಕಾರಿಗಳು ತಿಳಿಸಿದ್ದಾರೆ.
ಸಿದ್ದಾಪುರ: ನೆಲ್ಯಹುದಿಕೇರಿ, ಬೆಟ್ಟದಕಾಡು ಭಾಗದಲ್ಲಿ ದಂಪತಿಗಳಿಗೆ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಶನಿವಾರದಂದು ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಪಿ.ಡಿ.ಓ ಅನಿಲ್ಕುಮಾರ್ ನೇತೃತ್ವದಲ್ಲಿ ಆ ಭಾಗದ ಮನೆಗಳಿಗೆ ಸ್ಯಾನಿಟೈಸರ್ ಸಿಂಪಡಿಸಲಾಯಿತು. ಇದಲ್ಲದೆ ನೆಲ್ಯಹುದಿಕೇರಿಯಿಂದ ಮಡಿಕೇರಿಗೆ ಪರೀಕ್ಷೆ ಬರೆಯಲು ಮಕ್ಕಳನ್ನು ಕರೆದುಕೊಂಡು ಹೋಗುವ ಆಟೋರಿಕ್ಷಾ ಗೂ ಸಹಾ ಸ್ಯಾನಿಟೈಸರ್ ಸಿಂಪಡಿಸಲಾಯಿತು. ಇದಲ್ಲದೆ ನಿಬರ್ಂಧ ವಲಯದಲ್ಲಿರುವ ನಿವಾಸಿಗಳ ಪೈಕಿ ಅನಾರೋಗ್ಯದಿಂದಿರುವ ಮಂದಿಗೆ ಎಸ್.ಕೆ.ಎಸ್.ಎಸ್.ಎಫ್ ಹಾಗೂ ಎಸ್.ಎಸ್.ಎಫ್ ಸಂಘಟನೆಗಳ ವತಿಯಿಂದ ಅಗತ್ಯ ಔಷÀಧಿಗಳನ್ನು ತಲುಪಿಸುವಲ್ಲಿ ಸಂಘಟನೆಗಳ ಪದಾಧಿಕಾರಿಗಳು ಸೇವೆ ಸಲ್ಲಿಸುತ್ತಿದ್ದಾರೆ.
ಹುಲಸೆಯಲ್ಲಿ ಸೀಲ್ಡೌನ್
ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಸೆ ಗ್ರಾಮದಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಮನೆಯ ಮುಂಭಾಗದಲ್ಲಿ ನೂರು ಮೀಟರ್ಗಳಷ್ಟು ಅಂತರದವರೆಗೆ ಯಾರು ಪ್ರವೇಶ ಮಾಡದಂತೆ ಬ್ಯಾರಿಕೇಡ್ ಅಳವಡಿಸಿ ಅಲ್ಲಿಂದ ನೂರು ಮೀಟರ್ ಒಳಗಿನ ಎರಡು ಮನೆಗಳಿಗೂ ಪ್ರವೇಶಿಸದಂತೆ ಹಗ್ಗವನ್ನು ಕಟ್ಟಲಾಗಿದೆ. ಸೋಂಕಿತ ವ್ಯಕ್ತಿಯ ಮನೆಯ ಮುಂದಿನ ಹಕ್ಕೆ ಗ್ರಾಮಕ್ಕೆ ಹೋಗುವ ದಾರಿಯನ್ನು ಬಂದ್ ಮಾಡಲಾಗಿದೆ.
ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಹುಲಸೆ ಗ್ರಾಮದಲ್ಲಿರುವ ನಿವಾಸಿಗಳ ಮನೆಗಳ ಸುತ್ತಲೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸ್ಯಾನಿಟೈಸರ್ ಸಿಂಪಡಿಸಿದರು.
ಸಿದ್ದಾಪುರ: ಸಿದ್ದಾಪುರದಲ್ಲಿ ಕೋವಿಡ್ ತಡೆಗಟ್ಟುವ ಸಲುವಾಗಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪೆÇಲೀಸ್ ಠಾಣಾಧಿಕಾರಿ ಗ್ರಾಮ ಪಂಚಾಯಿತಿ ಕೊರೊನಾ ನಿಗ್ರಹ ದಳದ ಸದಸ್ಯರು ಹಾಜರಿದ್ದರು. ಭಾನುವಾರದ ಸಂತೆ ರದ್ದುಗೊಳಿಸಿರುವುದು ಸೇರಿದಂತೆ ಸೋಂಕು ಹರಡದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಧ್ವನಿವರ್ಧಕದ ಮೂಲಕ ಮಾಹಿತಿ ನೀಡಲಾಯಿತು.