ಮಡಿಕೇರಿ, ಜೂ. 28: 2020-21ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ 3 ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳುಮೆಣಸು ಹಾಗೂ ಅಡಿಕೆ ಬೆಳೆಗಳಿಗೆ ಅನುಷ್ಠಾನಗೊಳಿಸಲಾಗುವುದು.
ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಆರ್ದತೆ ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುವುದು. ಈ ಯೋಜನೆಯ ವಿಮೆ ನೋಂದಣಿ ಅಂತಿಮ ದಿನಾಂಕ 30.6.2020 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ರೈತರು ಕೂಡಲೇ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕಾ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್‍ಗಳ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯಿತಿ ತೋಟಗಾರಿಕಾ ಉಪನಿರ್ದೇಶಕರು ಕೋರಿದ್ದಾರೆ.