ನಾಪೆÇೀಕ್ಲು, ಜೂ. 29: ಕೊರೊನಾ ವೈರಸ್ ಅನ್ನು ಹತೋಟಿಯಲ್ಲಿಡುವ ನಿಟ್ಟಿನಲ್ಲಿ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಅಗತ್ಯ ವಸ್ತುಗಳ ವ್ಯಾಪಾರ ಮತ್ತು ಖರೀದಿಗೆ ಬೆಳಿಗ್ಗೆ 6ರಿಂದ ಅಪರಾಹ್ನ 2ರ ವರೆಗೆ ಮಾತ್ರ ಅವಕಾಶ ನೀಡಿದ ಹಿನ್ನೆಲೆಯಲ್ಲಿ 2 ಗಂಟೆಯ ನಂತರ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಯಿತು.
ಮಾರುಕಟ್ಟೆ ತೆರೆಯದಂತೆ ಪಂಚಾಯಿತಿ ಆದೇಶ ನೀಡಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸಾರ್ವಜನಿಕರ ದಟ್ಟಣೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಮಧ್ಯಾಹ್ನ 12ರ ನಂತರ ಜನರ ಓಡಾಟವೇ ವಿರಳವಾಗಿತ್ತು. ಆಗೊಮ್ಮೆ ಈಗೊಮ್ಮೆ ಪಟ್ಟಣಕ್ಕೆ ಬಂದು ಹೋಗುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳು ಖಾಲಿಯಾಗಿ ಓಡುತ್ತಿದ್ದುದು ಕಂಡು ಬಂತು. ಖಾಸಗಿ ವಾಹನಗಳು ಹಾಗೂ ಆಟೋ ರಿಕ್ಷಾಗಳ ಓಡಾಟ ಎಂದಿನಂತೆ ಇತ್ತು.