ವೀರಾಜಪೇಟೆ, ಜೂ. 29: ವೀರಾಜಪೇಟೆ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಕೊರೊನಾ ವೈರಸ್ ಸೋಂಕು ತ್ವರಿತ ಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 1 ರಂದು ವೀರಾಜಪೇಟೆ ಪಟ್ಟಣದಲ್ಲಿ ನಡೆಯಬೇಕಾಗಿದ್ದ ಸಂತೆಯನ್ನು ರದ್ದುಪಡಿಸಿರುವುದಾಗಿ ತಾಲೂಕು ತಹಶೀಲ್ದಾರ್ ಎಲ್.ಎಂ. ನಂದೀಶ್ ತಿಳಿಸಿದ್ದಾರೆ.
ಬಿಟ್ಟಂಗಾಲ ಹಾಗೂ ವೀರಾಜಪೇಟೆ ಪಟ್ಟಣದ ಮೀನುಪೇಟೆಯ ಒಂದು ಭಾಗವನ್ನು ಸೀಲ್‍ಡೌನ್ ಮಾಡಿ ಕಂಟೈನ್‍ಮೆಂಟ್ ವಲಯ ಎಂದು ಘೋಷಿಸಿರುವುದರಿಂದ ಸಂತೆಗಾಗಿ ಜನ ಸೇರುವುದನ್ನು ನಿಷೇಧಿಸಲಾಗಿದ್ದು ಸಂತೆಯನ್ನು ರದ್ದುಗೊಳಿಸಲಾಗಿದೆ ಎಂದು ನಂದೀಶ್ ತಿಳಿಸಿದ್ದಾರೆ.