ಮಡಿಕೇರಿ, ಜೂ. 29: ಪುತ್ತೂರಿನ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರನ್ನು ಕೊಡಗು ಜಿಲ್ಲೆಯ ನಾಪೋಕ್ಲು ಬ್ಲಾಕ್ ಉಸ್ತುವಾರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇಮಕ ಮಾಡಿ ಆದೇಶಿಸಿದ್ದಾರೆ. ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಶಿಫಾರಸ್ಸಿನಂತೆ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ನೇಮಕ ಮಾಡಿದ್ದಾರೆ.