ಸೋಮವಾರಪೇಟೆ,ಜೂ.29: ಕೋವಿಡ್-19 ವೈರಸ್ ಹರಡುವ ಭೀತಿಯಿರುವದರಿಂದ ಮಲ್ಲಳ್ಳಿ ಜಲಪಾತಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಬೇಕು ಎಂದು ಕುಮಾರಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಲ್ಲಳ್ಳಿ ಜಲಪಾತ ಹಾಗೂ ರೆಸಾರ್ಟ್, ಹೋಂಸ್ಟೇಗಳಲ್ಲಿ ಪ್ರವಾಸಿಗರು ವಾಸ್ತವ್ಯ ಹೂಡಿದ್ದಾರೆ. ಸೋಂಕಿತ ಪ್ರವಾಸಿಗರಿಂದ ಗ್ರಾಮೀಣ ಭಾಗಕ್ಕೂ ವೈರಸ್ ಹರಡುವ ಆತಂಕ ಎದುರಾಗಿದೆ. ಕೂಡಲೆ ಕ್ರಮಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ತಾಲೂಕು ತಹಶೀಲ್ದಾರ್ ಗೋವಿಂದರಾಜು ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಜೆ.ಸಿ.ಉದಯಕುಮಾರ್, ಕಾರ್ಯದರ್ಶಿ ಕಿರಣ್ ಹಾಗೂ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.