ಶ್ರೀಮಂಗಲ, ಜೂ. 29: ಟಿ. ಶೆಟ್ಟಿಗೇರಿ ಮತ್ತು ಶ್ರೀಮಂಗಲ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಮಾಸ್ಕ್ ವಿತರಿಸಲಾಯಿತು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುಂಞಂಗಡ ಅರುಣ್‍ಭೀಮಯ್ಯ, ಗೋಣಿಕೊಪ್ಪಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿರ್ದೇಶಕ ಕಟ್ಟೇರ ಈಶ್ವರ ಅವರು ನೂರಾರು ಸಂಖ್ಯೆಯಲ್ಲಿ ಮಾಸ್ಕ್‍ಗಳನ್ನು ವಿತರಿಸಿದರು.