ಕುಶಾಲನಗರ, ಜೂ 29: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ದೂರಿನ ಹಿನ್ನೆಲೆಯಲ್ಲಿ ವಿ.ಪಿ.ಶಶಿಧರ್ ಮೇಲೆ ಕುಶಾಲನಗರ ಪೆÇಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
ಇತ್ತೀಚೆಗೆ ಕುಶಾಲನಗರ ಡಿವೈಎಸ್ಪಿ ಕಛೇರಿಯ ಮುಂದೆ ಪ್ರತಿಭಟನೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಮೇಲೆ ಅವಾಚ್ಯ ಶಬ್ದ ಬಳಸಿ ನಿಂದಿಸಿರುವ ಶಶಿಧರ್ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಪಕ್ಷದ ಪ್ರಮುಖರು ಕುಶಾಲನಗರ ಸೇರಿದಂತೆ ಜಿಲ್ಲೆಯ ಹಲವು ಠಾಣೆಗಳಲ್ಲಿ ದೂರು ದಾಖಲಿಸಿದ್ದರು.