ಸುಂಟಿಕೊಪ್ಪÀ, ಜೂ.29: ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕೊರೊನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ ಗೌರವಧನ, ಪ್ರಶಂಸನ ಪತ್ರ ನೀಡಿ ಸನ್ಮಾನಿಸಲಾಯಿತು.
ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗುಂಡುಗುಟ್ಟಿ ಶ್ರೀ ಮಂಜನಾಥಯ್ಯ ಸಹಕಾರ ಭವನದಲ್ಲಿ ಆಯೋಜಿಸಲಾದ ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕ್‍ನ ಅಧ್ಯಕ್ಷ ದಾಸಂಡ ರಮೇಶ್ ಚಂಗಪ್ಪ ವಹಿಸಿದ್ದರು. ಸಹಕಾರ ಸಂಘದ ವತಿಯಿಂದ 24 ಮಂದಿ ಆಶಾ ಕಾರ್ಯಕರ್ತೆಯರಿಗೆ ತಲಾ 2,000 ರೂ.ಗಳನ್ನು ವಿತರಿಸಲಾಯಿತು.
ಈ ಸಂದರ್ಭ ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ಎಂ.ಎನ್. ಕೊಮಾರಪ್ಪ, ಕೆ.ಎಸ್. ಮಂಜುನಾಥ್, ಡಾ. ಶಶಿಕಾಂತ ರೈ, ಪಿ.ಸಿ. ಮೋಹನ್ ಹಾಗೂ ಸಿಬ್ಬಂದಿ ಇದ್ದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಬಾರ ಇಓ ಚೈತ್ರಾ ತಮ್ಮಯ್ಯ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.