ಸಿದ್ದಾಪುರ, ಜೂ. 30: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಬೆಟ್ಟದಕಾಡು ಗ್ರಾಮದಲ್ಲಿ ಕೊರೊನಾ ವೈರಸ್ ಪತ್ತೆಯಾದ ನಿಬರ್ಂಧಿತ ಪ್ರದೇಶದ ನಿವಾಸಿಗಳಿಗೆ ಅಗತ್ಯ ಆಹಾರ ಪದಾರ್ಥಗಳನ್ನು ವಿತರಿಸಲಾಯಿತು
ಬೆಟ್ಟದಕಾಡು ಭಾಗದಲ್ಲಿ ವ್ಯಕ್ತಿಯೋರ್ವನಿಗೆ ವೈರಸ್ ಪತ್ತೆಯಾದ ಬಳಿಕ ಆತನ ಸಂಪರ್ಕದಲ್ಲಿದ್ದ ವ್ಯಕ್ತಿಯೊಬ್ಬನಿಗೆ ಪತ್ತೆಯಾದ ಹಿನ್ನೆಲೆಯಲ್ಲಿ ಬೆಟ್ಟದಕಾಡು ನಿಬರ್ಂಧಿತ ಪ್ರದೇಶವೆಂದು ಜಿಲ್ಲಾಡಳಿತ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಆ ಭಾಗದಿಂದ ಯಾರೂ ಕೂಡ ಹೊರಬರದಂತೆ ಪಂಚಾಯಿತಿ ವತಿಯಿಂದ ಸೂಚನೆ ನೀಡಲಾಗಿತ್ತು. ಇದೀಗ ಗ್ರಾಮ ಪಂಚಾಯಿತಿ ವತಿಯಿಂದ ಬೆಟ್ಟದಕಾಡು 7ನೇ ವಾರ್ಡಿನ ಸದಸ್ಯರ ಅನುದಾನದಿಂದ ನೂರಾರು ಕುಟುಂಬಗಳಿಗೆ ಅಗತ್ಯ ವಸ್ತುಗಳಾದ ಅಕ್ಕಿ, ಸಕ್ಕರೆ, ಎಣ್ಣೆ ಪದಾರ್ಥಗಳು ಸೇರಿದಂತೆ ಇನ್ನಿತರ ಪದಾರ್ಥಗಳ ಕಿಟ್‍ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಸುನಿತ ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಸಫಿಯ, ಗ್ರಾ.ಪಂ. ಸದಸ್ಯರುಗಳಾದ ಹನೀಫ್, ಅನ್ನಮ್ಮ, ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಹಾಜರಿದ್ದರು.