ನಾಪೆÇೀಕ್ಲು, ಜೂ. 30: ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪಕ್ಕದ ಕಾವೇರಿ ನದಿಯಲ್ಲಿ ಕೈ ತೊಳೆಯಲು ಹೋಗಿ ತೋಟದ ಮಾಲೀಕ, ಪಾರಾಣೆ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಸಮೀಪದ ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಜಯಾ ಪೂವಣ್ಣ (55) ಮೃತಪಟ್ಟ ದುರ್ದೈವಿ.

ಇವರು ಮಂಗಳವಾರ ಕೊಂಡಂಗೇರಿಯ ತಮ್ಮ ತೋಟಕ್ಕೆ ತೆರಳಿದ್ದರು. ಈ ಬಗ್ಗೆ ಸಿದ್ದಾಪುರ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಸಿದ್ದಾಪುರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥ ರಿಗೆ ಹಸ್ತಾಂತರಿಸಲಾಯಿತು. ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸಂತಾಪ : ಮೃತರ ನಿಧನಕ್ಕೆ ಮಡಿಕೇರಿ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ. ಪೂರ್ಣೇಶ್, ಕಾರ್ಯದರ್ಶಿ, ಸದಸ್ಯರುಗಳು ಹಾಗೂ ರಾಜ್ಯ ಪ್ರಾಥಮಿಕ ಹಾಗೂ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೆಚ್.ಎ. ಪ್ರಸನ್ನಕುಮಾರ್ ಅವರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.