ಮಡಿಕೇರಿ, ಜೂ. 30: ದೇಶಾದ್ಯಂತ ಮಾರಕ ಕೊರೊನಾ ವೈರಸ್ (ಕೋವಿಡ್-19) ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಎಂ. ಬಾಡಗ ಗ್ರಾಮದ ಸುಭಾಶ್‍ನಗರ ನಿರ್ಬಂಧಿತ ಪ್ರದೇಶವಾಗಿರುವುದರಿಂದ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರ್ನಾಡು ಗ್ರಾಮದಲ್ಲಿ ತಾ. 2 ರಂದು ನಡೆಯುವ ಸಂತೆಯನ್ನು ರದ್ದುಪಡಿಸಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.