ಕುಶಾಲನಗರ, ಜು.1: ಕುಶಾಲನಗರ ಗಡಿಭಾಗ ಕೊಪ್ಪ ಮತ್ತು ಬೈಲುಕೊಪ್ಪ ವ್ಯಾಪ್ತಿಯಲ್ಲಿ ಮಧ್ಯಾಹ್ನ 2 ಗಂಟೆ ನಂತರ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಗ್ರಾಮದ ಸುತ್ತಮುತ್ತ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಆದೇಶದಂತೆ ಸ್ಥಳೀಯ ಪಂಚಾಯ್ತಿ ಅಧಿಕಾರಿಗಳು ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಸಂಬಂಧ ಪಂಚಾಯ್ತಿ ಮತ್ತು ಪೊಲೀಸ್ ಅಧಿಕಾರಿಗಳು ಧ್ವನಿವರ್ದಕ ಮೂಲಕ ಜನರಿಗೆ ಮಾಹಿತಿ ನೀಡಿದ್ದು, ನಿಷೇಧಿತ ಅವಧಿಯಲ್ಲಿ ಯಾರೊಬ್ಬರೂ ಸಾರ್ವಜನಿಕವಾಗಿ ಅನವಶ್ಯಕ ಓಡಾಡದಂತೆ ಎಚ್ಚರಿಸಿದ್ದಾರೆ. ಉಳಿದಂತೆ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ರ ತನಕ ರಾತ್ರಿ ಕಫ್ರ್ಯೂ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ವಾಹನ ಸಂಚಾರ ಕೂಡ ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಮಾರಾಟ ಮತ್ತು ಸಾಗಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.